ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 635 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,67,311ಕ್ಕೆ ತಲುಪಿದೆ.
ಭಾರತದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,546ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,175ಕ್ಕೆ ಇಳಿಕೆಯಾಗಿದೆ.
ದೇಶದಲ್ಲಿ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,29,590ಕ್ಕೆ ತಲುಪಿದೆ. ಇನ್ನು ಈ ವರೆಗೂ 90,33,56,300 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಇಲ್ಲಿಯವರೆಗೂ ದೇಶದಲ್ಲಿ 2,19,83,58,500 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.