News Karnataka Kannada
Thursday, May 02 2024
ದೇಶ

9/11 ಮಾನವೀಯತೆಯ ಮೇಲೆ ನಡೆದ ದಾಳಿ : ಪ್ರಧಾನಮಂತ್ರಿ ನರೇಂದ್ರ ಮೋದಿ

Narendra Modi 15082021
Photo Credit :

ನವದೆಹಲಿ: 1893ರಲ್ಲಿ ಸ್ವಾಮಿ ವಿವೇಕಾನಂದರ ಅವರು ಚಿಕಾಗೋದಲ್ಲಿ ಮಾಡಿದ್ದ ಭಾಷಣದಲ್ಲಿ 9/11 ದಂತದ ದಾಳಿ ಘಟನೆಗಳಿಗೂ ಶಾಶ್ವತ ಪರಿಹಾರಗಳಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.

ಅಹ್ಮದಾಬಾದ್ ನ ಸರ್ದಾರ್ ಧಾಮ್ ಭವನವನ್ನು ಉದ್ಘಾಟಿಸಿ ಮಾತನಾಡಿರುವ ಅವರು, 9/11 ದಿನ ಇದು ವಿಶ್ವದ ಇತಿಹಾಸದಲ್ಲಿ ಮಾನವೀಯತೆಯ ಮೇಲೆ ನಡೆದ ದಾಳಿ ಎಂದು ಈ ದಿನವನ್ನು ನೆನಪಿಸಿಕೊಳ್ಳಲಾಗುತ್ತದೆ. ಆದರೆ, ಇದೇ ದಿನಾಂಕವು ಮಾನವೀಯ ಮೌಲ್ಯಗಳ ಬಗ್ಗೆಯೂ ನಮಗೆ ಪಾಠ ಕಲಿಸಿದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 11 ನಮಗೆ ಅತ್ಯಂತ ಮುಖ್ಯವಾದ ದಿನ ಕೂಡ ಹೌದು, ಏಕೆಂದರೆ, 1893ರಲ್ಲಿ ಇದೇ ದಿನ ಸ್ವಾಮಿ ವಿವೇಕಾನಂದ ಅವರು ಚಿಕಾಗೋದಲ್ಲಿ ಐಸಿಹಾಸಿಕ ಭಾಷಣ ಮಾಡಿದ ದಿನವಾಗಿದೆ. ಭಾಷಣದಲ್ಲಿ ವಿವೇಕಾನಂದ ಅವರು ಮಾನವೀಯತೆ ಮೌಲ್ಯಗಳ ಬಗ್ಗೆ ಇಡೀ ವಿಶ್ವಕ್ಕೆ ಪಾಠ ಹೇಳಿದ್ದರು. 9/11 ಭಯೋತ್ಪಾದಕ ದಾಳಿಯಂತಹ ಘಟನೆಗಳಿಗೆ ಈ ಬೋಧನೆಗಳು ಶಾಶ್ವತ ಪರಿಹಾರಗಳನ್ನು ನೀಡುತ್ತವೆ ಎಂದು ಇಡೀ ವಿಶ್ವ ಅರಿತುಕೊಂಡಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು