ನವದೆಹಲಿ: ದೆಹಲಿಯ ಅಲಿಪುರ್ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಇಂದು ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಮಾಹಿತಿ ಪಡೆದ ಬಳಿಕ, 34 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದೆ. ಆದರೆ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ದೆಹಲಿಯ ನರೇಲಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡ ಒಂದು ದಿನದ ನಂತರ ಈ ಘಟನೆ ನಡೆದಿದೆ.
ಮತ್ತೊಂದು ದುರಂತ ಘಟನೆಯಲ್ಲಿ, ಜೈಪುರದ ಬಸ್ಸಿ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದು ವರದಿಯಾಗಿತ್ತು.
#WATCH | Delhi: A fire broke out at a factory in Alipur. 25 fire tenders at the spot. Further details awaited: Delhi Fire Service https://t.co/OMwitA0kuH pic.twitter.com/nzEqXDJM6s
— ANI (@ANI) March 25, 2024