ದೇಶ

ವಾಣಿಜ್ಯ ಬಳಕೆಯ ‘ಎಲ್​ಪಿಜಿ’ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ

ನವದೆಹಲಿ: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆಯಾದ ಬಳಿಕ ಇದೀಗ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯೂ ಇಳಿಕೆಯಾಗಿದೆ.

ಎಲ್‌ಪಿಜಿ ಗ್ರಾಹಕರಿಗೆ ಪ್ರಮುಖ ಪರಿಹಾರವಾಗಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 158ರೂ.ನಷ್ಟು ಕಡಿತಗೊಳಿಸಿವೆ ಎಂದು ಮೂಲಗಳು ತಿಳಿಸಿವೆ.

ಹೊಸ ಬೆಲೆಗಳು ಇಂದಿನಿಂದ ಜಾರಿಗೆ ಬರಲಿದ್ದ, ದೆಹಲಿಯ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟದ ಬೆಲೆ 1,522ರೂ. ಆಗಿರುತ್ತದೆ. ಈ ಹಿಂದೆ, ರಕ್ಷಾ ಬಂಧನದ ಮುನ್ನಾದಿನದಂದು, ದೇಶದ ಮಹಿಳೆಯರಿಗೆ ಉಡುಗೊರೆಯಾಗಿ ಕೇಂದ್ರ ಸರ್ಕಾರವು ದೇಶೀಯ ಎಲ್‌ಪಿಜಿ ಬೆಲೆಯನ್ನು 200ರೂ. ಕಡಿತಗೊಳಿಸಿತ್ತು.

ಸೆ.1 ರಿಂದ ಜಾರಿಗೆ ಬರುವಂತೆ ಎಲ್ಪಿಜಿ, ದ್ರವೀಕೃತ ಪ್ರೊಪೇನ್ ಮತ್ತು ದ್ರವೀಕೃತ ಬ್ಯೂಟೇನ್ ಆಮದನ್ನು ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್ (ಎಐಡಿಸಿ) ನಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗಿದೆ ಎಂದು ಹಣಕಾಸು ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.

 

Ashitha S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

9 hours ago