Categories: ದೇಶ

ಜ್ಞಾನವಾಪಿ ಎಎಸ್‌ಐ ಸಮೀಕ್ಷೆ ಕೇಸ್: ಅಲಹಾಬಾದ್ ಹೈಕೋರ್ಟ್​ನಿಂದ ಮಹತ್ವದ ತೀರ್ಪು

ಅಲಹಾಬಾದ್: ಜ್ಞಾನವಾಪಿ ಮಸೀದಿಯ ‘ವೈಜ್ಞಾನಿಕ ಸಮೀಕ್ಷೆ’ಗೆ ಅಲಹಾಬಾದ್ ಹೈಕೋರ್ಟ್ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ವಾರಣಾಸಿ ಜಿಲ್ಲಾ ನ್ಯಾಯಾಲಯವು ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿರುವ ಕೋರ್ಟ್​, ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಜೊತೆಗೆ ಮಸೀದಿಯ ಸಂಕೀರ್ಣವನ್ನು ವೈಜ್ಞಾನಿಕವಾಗಿ ಸಮೀಕ್ಷೆಗೆ ಒಳಪಡಿಸುವಂತೆ ಭಾರತೀಯ ಪುರಾತತ್ವ ಇಲಾಖೆಗೆ ಸೂಚನೆ ನೀಡಿದೆ.

ಕಳೆದ ಜುಲೈ 21 ರಂದು ವಾರಣಾಸಿ ಜಿಲ್ಲಾ ನ್ಯಾಯಾಲಯವು ASI ಸರ್ವೇಗೆ ಅನುಮತಿ ನೀಡಿ ಆದೇಶ ನೀಡಿತ್ತು. ಅಂತೆಯೇ ಜುಲೈ 24 ರಂದು ಭಾರತೀಯ ಪುರಾತತ್ವ ಇಲಾಖೆಯ ಸಮೀಕ್ಷಾ ತಂಡವು  30 ಸದಸ್ಯರ ನೇತೃತ್ವದಲ್ಲಿ ಮಸೀದಿಯ ಸರ್ವೇ ಕಾರ್ಯವನ್ನು ಆರಂಭಿಸಲಾಗಿತ್ತು. ವಿಡಿಯೋಗ್ರಫಿ ಮತ್ತು ಫೋಟೋಗ್ರಫಿ ಮೂಲಕ ಸರ್ವೇ ಶುರುವಾಗುತ್ತಿದ್ದಂತೆಯೇ ಮಸೀದಿಯ ಆಡಳಿತ ಮಂಡಳಿ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಪ್ರಕರಣವನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಬಳಿ ಮಸೀದಿ ಆಡಳಿತ ಮಂಡಳಿ ಮನವಿ ಮಾಡಿಕೊಂಡಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್​, ASI ಸರ್ವೇಗೆ ತಾತ್ಕಾಲಿಕ ತಡೆ ಕೊಟ್ಟು, ಮಸೀದಿ ಆಡಳಿತ ಮಂಡಳಿಗೆ ಗುಜರಾತ್​ನ ಅಲಹಾಬಾದ್​ ಹೈಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಲು ಸೂಚಿಸಿತ್ತು. ಜುಲೈ 27 ರಂದು ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ಇವತ್ತು, ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಮಾತ್ರವಲ್ಲ, ಎಎಸ್​ಐ ಸರ್ವೇ ನಡೆಸುವಂತೆ ಆದೇಶ ನೀಡಿದೆ.

ಸದ್ಯ ಈ ಸ್ಥಳವು ವರ್ಷಕ್ಕೆ ಒಮ್ಮೆ ಮಾತ್ರ ಪ್ರಾರ್ಥನೆಗೆ ತೆರೆಯುತ್ತದೆ. ಇಲ್ಲಿ ನಿತ್ಯವೂ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಮತ್ತು ಹಳೆಯ ದೇವಸ್ಥಾನ ಸಂಕೀರ್ಣದೊಳಗೆ ಕಾಣಿಸುವ ಹಾಗೂ ಕಾಣಿಸದ ದೇವತೆಗಳಿಗೆ ಕೂಡ ಪೂಜೆಗೆ ಅನುಮತಿ ಕೊಡಬೇಕು ಎಂದು ಹಿಂದೂಗಳು ಮನವಿ ಮಾಡಿದ್ದರು. ಆದರೆ ಇದು ದೇವಸ್ಥಾನವಲ್ಲ, ಇದು ಮಸೀದಿ, ಜೊತೆಗೆ ಇಲ್ಲಿ ಯಾವುದೇ ವಿಗ್ರಹಗಳಿಲ್ಲ ಎಂದು ಮುಸ್ಲೀಂರ ವಾದವಾಗಿದೆ.

Ashitha S

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

10 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

26 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

29 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

52 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago