ನವದೆಹಲಿ: ಕೇಂದ್ರ ಸರ್ಕಾರದಿಂದ ದೇಶದಲ್ಲಿನ ಗ್ಯಾಂಗ್ ರೇಪ್ ನಂತಹ ಪ್ರಕರಣ ತಡೆಗಟ್ಟೋದಕ್ಕಾಗಿ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಈ ನಿಟ್ಟಿನಲ್ಲಿ ಲೋಕಸಭೆಯಲ್ಲಿ ತಿದ್ದುಪಡಿ ಮಸೂಧೆಯನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದಾರೆ. ಈ ತಿದ್ದುಪಡಿ ಮಸೂದೆಯಂತೆ ಇನ್ಮುಂದೆ ಗ್ಯಾಂಗ್ ರೇಪ್ ಮಾಡಿದವರಿಗೆ 20 ವರ್ಷ ಶಿಕ್ಷೆ ವಿಧಿಸುವಂತ ಕಾನೂನು ಜಾರಿಯಾಗಲಿದೆ.
ಈ ಸಂಬಂಧ ಸಂಸತ್ ಮುಂಗಾರು ಅಧಿವೇಶನದ ಕೊನೆಯ ದಿನವಾದ ಇಂದು ಲೋಕಸಭೆಯಲ್ಲಿ ಅಪರಾಧ ಕಾನೂನು ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದರು.