ನವದೆಹಲಿ : ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ತಿಳಿಸಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಬಳಿ ಪೋರ್ಟ್ ಬ್ಲೇರ್ ನಲ್ಲಿ ಇಂದು ಬೆಳಗ್ಗೆ 5.30 ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ಮಾಹಿತಿ ನೀಡಿದೆ.