ಪೋರ್ಟ್ ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ ಬಳಿ ಶನಿವಾರ ಬೆಳಗ್ಗೆ 5.9 ತೀವ್ರತೆಯ ಭೂಕಂಪನ ವರದಿಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪದ ಕೇಂದ್ರಬಿಂದು ಪೋರ್ಟ್ ಬ್ಲೇರ್ನ ಆಗ್ನೇಯಕ್ಕೆ 126 ಕಿಮೀ ದೂರದಲ್ಲಿದೆ ಎಂದು ಸಂಸ್ಥೆ ತಿಳಿಸಿದೆ. ಭೂಕಂಪನ ಕೇಂದ್ರ ಬಿಂದು ಭೂಮಿಯಿಂದ 69 ಕಿಮೀ ಆಳದಲ್ಲಿತ್ತು ಎಂದು ಭೂಕಂಪಶಾಸ್ತ್ರ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.