News Karnataka Kannada
Sunday, April 21 2024
Cricket
ಆಂಧ್ರಪ್ರದೇಶ

ಔಷಧ ಘಟಕದಲ್ಲಿ ಅಗ್ನಿ ಅವಘಡ: ಆರು ಮಂದಿ ಸಾವು

Fire
Photo Credit : Twitter

ಹೈದರಾಬಾದ್ : ಔಷಧ ಘಟಕವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡ ಘಟನೆ ಗುರುವಾರ ಮಧ್ಯರಾತ್ರಿ ಆಂಧ್ರಪ್ರದೇಶದಲ್ಲಿ ನಡೆದಿದೆ. ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟಗೊಂಡಿದ್ದು ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಪಶ್ಚಿಮ ಗೋದಾವರಿ ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿ ಈ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡಾಗ 18 ಸಂತ್ರಸ್ತರು ಔಷಧೀಯ ಘಟಕದ 4 ನೇ ಘಟಕದಲ್ಲಿ ಕೆಲಸ ಮಾಡುತ್ತಿದ್ದರು.

ಎರಡು ಗಂಟೆಯಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಯಿತು. ಮೃತಪಟ್ಟ ಆರು ಮಂದಿಯಲ್ಲಿ ನಾಲ್ವರು ಬಿಹಾರದಿಂದ ವಲಸೆ ಬಂದ ಕಾರ್ಮಿಕರು.

ಮೃತರನ್ನು ಉದುರುಪತಿ ಕೃಷ್ಣಯ್ಯ, ಬಿ ಕಿರಣ್ ಕುಮಾರ್, ಕಾರು ರವಿ ದಾಸ್, ಮನೋಜ್ ಕುಮಾರ್, ಸುವಾಸ್ ರವಿ ದಾಸ್ ಮತ್ತು ಹಬ್ದಾಸ್ ರವಿ ದಾಸ್ ಎಂದು ಗುರುತಿಸಲಾಗಿದೆ.

ಘಟನೆ ಬಗ್ಗೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡವರಿಗೆ ತಲಾ 5 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದರು. ಗಾಯಗೊಂಡವರ ಸ್ಥಿತಿಯ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು