News Karnataka Kannada
Thursday, April 18 2024
Cricket
ಆಂಧ್ರಪ್ರದೇಶ

ಹಳಿಯಲ್ಲಿ ನಿಂತಿದ್ದವರ ಮೇಲೆ ಹರಿದ ರೈಲು: ಐವರು ಸಾವು

June. Vande Bharat train service between Bengaluru and Dharwad to start from May 27
Photo Credit : IANS

ಹೈದರಾಬಾದ್ : ರೈಲು ಹರಿದ ಪರಿಣಾಮ ಐವರು ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ಸೋಮವಾರ ರಾತ್ರಿ ನಡೆದಿದೆ. ಈ ದುರ್ಘಟನೆಯಲ್ಲಿ ಮತ್ತೊಬ್ಬ ಪ್ರಯಾಣಿಕ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಅಪಘಾತದ ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ದುರ್ಘಟನೆ ನಡೆದಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಈ ಪ್ರಯಾಣಿಕರು ತಾವು ಪ್ರಯಾಣಿಸುತ್ತಿದ್ದ ಗುವಾಹಟಿ ಎಕ್ಸ್‌ಪ್ರೆಸ್ ರೈಲಿನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ ತುರ್ತು ಸರಪಳಿಯನ್ನು ಎಳೆದರು. ಅವರು ರೈಲಿನಿಂದ ಇಳಿದು ಹಳಿಗಳ ಮೇಲೆ ನಿಂತಿದ್ದರು. ಆಗ ಎದುರಿನಿಂದ ಬಂದ ಇನ್ನೊಂದು ರೈಲು ‘ಕೋನಾರ್ಕ್ ಎಕ್ಸ್‌ಪ್ರೆಸ್’ ಇವರು ನಿಂತಿದ್ದ ಹಳಿಯ ಮೇಲೆ ಬಂದಿತ್ತು. ಇದನ್ನು ತಿಳಿಯದ ದುರ್ದೈವಿಗಳು ರೈಲಿನಡಿ ಸಿಲುಕಿಕೊಂಡಿದ್ದಾರೆ. ರೈಲು ಭುವನೇಶ್ವರದಿಂದ ವಿಶಾಖಪಟ್ಟಣಂಗೆ ತೆರಳುತ್ತಿತ್ತು.

ಮೃತರಲ್ಲಿ ಇಬ್ಬರು ಅಸ್ಸಾಂ ಮೂಲದವರು ಎಂದು ಗುರುತಿಸಲಾಗಿದೆ. ಉಳಿದವರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು