ಆಂಧ್ರಪ್ರದೇಶ

ಅಧಿಕಾರಗಳು ಎಲ್ಲ ರಾಜ್ಯಗಳ ನಡುವೆ ಸಮಾನವಾಗಿ ಹಂಚಿಕೆಯಾಗಬೇಕು

ಚೆನ್ನೈ: ತಮಿಳುನಾಡಿಗೆ ಸಂಸತ್‌ನಲ್ಲಿ ಕಡಿಮೆ ಪ್ರಾತಿನಿಧ್ಯ ನೀಡುವ ಮೂಲಕ ಕಳೆದ 14 ಚುನಾವಣೆಗಳಲ್ಲಿ ಅನ್ಯಾಯ ಮಾಡಲಾಗಿದೆ. ಹೀಗಾಗಿ ಕೋರ್ಟ್ ಅಂದಾಜಿನಂತೆ ಸುಮಾರು 5,600 ಕೋಟಿ ರೂ ಮೊತ್ತದ ಹಣವನ್ನು ಪರಿಹಾರವನ್ನಾಗಿ ನೀಡಬೇಕು ಎಂದು ನ್ಯಾಯಮೂರ್ತಿಗಳಾದ ಎನ್. ಕಿರುಬಾಕರನ್ ಮತ್ತು ಬಿ ಪುಗಳೇಂದಿ ಅವರನ್ನು ಒಳಗೊಂಡ ನ್ಯಾಯಪೀಠ ಆದೇಶ ನೀಡಿದೆ.

ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧಿತ್ವದ ಸಂಖ್ಯೆಯನ್ನು ಕಡಿಮೆ ಮಾಡಿದರೆ ಅದರಲ್ಲಿ ರಾಜ್ಯ ಯಾವ ತಪ್ಪೂ ಇಲ್ಲ. ಹೀಗಿದ್ದಾಗ ಅದರ ರಾಜ್ಯಸಭೆಯ ಸೀಟುಗಳ ಕೋಟಾವನ್ನು ಹೆಚ್ಚಿಸಬೇಕು. ಸಂಸತ್ತನ್ನು ಪ್ರತಿನಿಧಿಸುವ ರಾಜ್ಯಗಳ ಸೀಟುಗಳನ್ನು ನಿರ್ಧರಿಸಲು ಜನಸಂಖ್ಯೆ ಮೂಲವಾಗಬಾರದು. ಜನಸಂಖ್ಯೆ ನಿಯಂತ್ರಣ ಸಾಧಿಸುವಲ್ಲಿ ವಿಫಲವಾದ ರಾಜ್ಯಗಳು ಸಂಸತ್ತಿನಲ್ಲಿ ಅಧಿಕ ಪ್ರಾತಿನಿಧ್ಯದ ಪ್ರಯೋಜನ ಪಡೆಯುತ್ತಾರೆ. ಆದರೆ ಜನಸಂಖ್ಯೆ ನಿಯಂತ್ರಣವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ತಮಿಳುನಾಡು, ಆಂಧ್ರಪ್ರದೇಶದಂತಹ ರಾಜ್ಯಗಳು ಸೀಟುಗಳನ್ನು ಕಳೆದುಕೊಂಡಿವೆ.ಜನಸಂಖ್ಯೆ ನಿಯಂತ್ರಣವನ್ನು ಯಶಸ್ವಿಯಾಗಿ ನಿರ್ವಹಿಸಿರುವ ತಮಿಳುನಾಡು, ಆಂಧ್ರಪ್ರದೇಶದಂತಹ ದಕ್ಷಿಣದ ರಾಜ್ಯಗಳಿಗೆ ಏಕೆ ಸಂಸತ್‌ನಲ್ಲಿ ಕೆಲವೇ ಸೀಟುಗಳನ್ನು ನೀಡಲಾಗುತ್ತಿದೆ ಮತ್ತು ಅಧಿಕ ಜನಸಂಖ್ಯೆ ಇರುವ ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಏಕೆ ಅಧಿಕ ಸಂಸತ್ ಸೀಟುಗಳಿವೆ ಎಂದು ಕೇಂದ್ರ ಸರ್ಕಾರವನ್ನು ಮದ್ರಾಸ್ ಹೈಕೋರ್ಟ್ ಪ್ರಶ್ನಿಸಿದೆ.1962ರವರೆಗೂ ಲೋಕಸಭೆಗೆ ತಮಿಳುನಾಡು 41 ಪ್ರತಿನಿಧಿಗಳನ್ನು ಹೊಂದಿತ್ತು. ಆದರೆ ಜನಸಂಖ್ಯೆ ಇಳಿಕೆಯಾದ ಹಿನ್ನೆಲೆಯಲ್ಲಿ ಲೋಕಸಭೆ ಸದಸ್ಯ ಸ್ಥಾನಗಳನ್ನು 39ಕ್ಕೆ ಇಳಿಸಲಾಯಿತು. ಪ್ರತಿ ಮತವೂ ಮುಖ್ಯವಾಗುವುದರಿಂದ ಎರಡು ಸೀಟುಗಳು ಕಡಿಮೆಯಲ್ಲ ಎಂದು ನ್ಯಾಯಪೀಠ, 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಉರುಳಲು ಕಾರಣವಾದ ಅವಿಶ್ವಾಸ ನಿರ್ಣಯವನ್ನು ಉಲ್ಲೇಖಿಸಿತು.

Swathi MG

Recent Posts

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

15 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

1 hour ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

3 hours ago