ಗೋದಾವರಿ : ಆಂಧ್ರ ಪ್ರದೇಶದ ಗೋದಾವರಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ವೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಪರಿಣಾಮ 9 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಬಸ್ ನಲ್ಲಿ ಒಟ್ಟು 20 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗೂಡೆಂ ಎಂಬಲ್ಲಿ ಸಾರಿಗೆ ಬಸ್ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದಿದ್ದು, ಬಸ್ ನಿಲ್ಲದ್ದ 9 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 9 ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.