ಆಂಧ್ರಪ್ರದೇಶ : ಇಂದಿನಿಂದ ತಂಬಾಕು, ಗುಟ್ಕಾ, ಪಾನ್ ಮಸಾಲಾವನ್ನು ನಿಷೇಧಿಸಿ, ಆಂಧ್ರಪ್ರದೇಶ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಮತ್ತು ಜಗಿಯಲಾದ ತಂಬಾಕು ವಸ್ತುಗಳ ತಯಾರಿಕೆ, ವಿತರಣೆ ಮತ್ತು ಮಾರಾಟವನ್ನು ಸರ್ಕಾರ ನಿಷೇಧಿಸಿದೆ.
ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ. ಗುಟ್ಕಾ ನಿಷೇಧ ಪ್ರಶ್ನಿಸಿ ಹೈಕೋರ್ಟ್ ನಲ್ಲಿ 160 ಅರ್ಜಿಗಳು ಸಲ್ಲಿಕೆಯಾಗಿವೆ. ಇದನ್ನು ಹೈಕೋರ್ಟ್ ವಜಾ ಮಾಡಿದೆ.