News Karnataka Kannada
Monday, April 29 2024
ಆಂಧ್ರಪ್ರದೇಶ

ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ 6 ತಿಂಗಳ ಮಗು ಸೇರಿ ಐದು ಸಾವು!!

Accident.
Photo Credit : News Kannada

ಕೃಷ್ಣಾ ಜಿಲ್ಲೆ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಜಾಕಾಲುವೆಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ತಿಂಗಳ ಮಗು ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ.

ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಜಗ್ಗಯ್ಯಪೇಟೆ ವಲಯದಲ್ಲಿ ಈ ಅಪಗಾತ ಸಂಭವಿಸಿದ್ದು, ಹಾನರ್ ನಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಮೋರಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಅಪಘಾತದಲ್ಲಿ ಆರು ತಿಂಗಳ ಮಗು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಮಗುವಿನ ಅನ್ನಪ್ರಾಶನಕ್ಕಾಗಿ ಕುಟುಂಬ ಸಮೇತ ಏಲೂರಿಗೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರನ್ನು ಕುಟುಂಬರಾವ್, ಇಂದಿರಾ, ಶಾಂತಿ, ತಾಯಿ ಮೇರಿ ಮತ್ತು ಆರು ತಿಂಗಳ ಮಗು ರಾಜಕುಮಾರ್ ಎಂದು ಗುರುತಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು