ಪ್ರಕಾಶಂ (ಆಂಧ್ರಪ್ರದೇಶ): ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಮೂವರು ಸಜೀವ ದಹನವಾಗಿರುವ ಘಟನೆ ಮಂಗಳವಾರ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮೆಟಮೇಡಪಲ್ಲಿ ಎಕ್ಸ್ ರಸ್ತೆಯಲ್ಲಿ ನಡೆದಿದೆ.
ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಪ್ರಕಾಶಂ ಜಿಲ್ಲೆಯ ಮೇಟಮೇಡಪಲ್ಲಿ ಎಕ್ಸ್ ರಸ್ತೆಯ ಎದುರು ಬದಿಯಲ್ಲಿ ಈ ಅಪಘಾತ ಸಂಭವಿಸಿದೆ. ಮೃತರು ಚಿತ್ತೂರು ಜಿಲ್ಲೆಯ ಭಾಕರಪೇಟೆಗೆ ಸೇರಿದವರು ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಪ್ಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.