ಮೂರು ದಿನಗಳ ಆಂಧ್ರಪ್ರದೇಶ ಪ್ರವಾಸದಲ್ಲಿರುವ ಗೃಹ ಸಚಿವ ಅಮಿತ್ ಶಾ ಶನಿವಾರ ರಾತ್ರಿ ತಿರುಪತಿ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಅಮಿತ್ ಶಾ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ತಡರಾತ್ರಿ ರೇಣಿಗುಂಟಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾರನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಸ್ವಾಗತಿಸಿದರು.
ಇಂದು ಅಮಿತ್ ಶಾ ಅಧ್ಯಕ್ಷತೆಯಲ್ಲಿ ದಕ್ಷಿಣ ವಲಯದ ಸಮನ್ವಯಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಮುಖ್ಯಮಂತ್ರಿಗಳ ಸಮ್ಮೇಳನ ನಡೆಯಲಿದೆ.
ಬಳಿಕ ಅಕ್ಚರ ವಿದ್ಯಾಲಯ, ಸ್ವರ್ಣ ಭಾರತಿ ಟ್ರಸ್ಟ್ ಮತ್ತು ,ಉಪ್ಪವರಪು ಫೌಂಡೇಷನ್ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.