ಆಂಧ್ರ ಪ್ರದೇಶ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಭಾನುವಾರ ಹಗಲು ಹೊತ್ತಿನಲ್ಲಿ ವಿದ್ಯಾರ್ಥಿನಿಯನ್ನು ಇರಿದು ಕೊಲೆ ಮಾಡಲಾಗಿದೆ.
ಸ್ಥಳೀಯ ಪೊಲೀಸರ ಪ್ರಕಾರ, ಹುಡುಗಿ ಗುಂಟೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ-ಟೆಕ್ ಮೂರನೇ ವರ್ಷದ ವಿದ್ಯಾರ್ಥಿನಿಯಾಗಿದ್ದಳು. “ಇಂದು ಬೆಳಿಗ್ಗೆ, ಆಕೆ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ವ್ಯಕ್ತಿಯೊಬ್ಬ ತನ್ನ ಬೈಕಿನಲ್ಲಿ ಬರುವಂತೆ ಕೇಳಿಕೊಂಡಿದ್ದಾನೆ.
ಅದನ್ನು ಆಕೆ ನಿರಾಕರಿಸಿದ್ದಕ್ಕೆ, ಆ ಯುವಕ ಅವಳನ್ನು ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ. ನಂತರ ಆಕೆಯ ಮನೆಯವರಿಗೆ ಮಾಹಿತಿ ನೀಡಿ ಗುಂಟೂರಿನ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.