ವಿಶಾಖಪಟ್ಟಣಂ: ಬ್ಲಾಸ್ಟ್ ಫರ್ನೇಸ್ ಪ್ಲಾಂಟ್-2 ರಿಂದ ದ್ರವ ಸೋರಿಕೆಯಾದ ನಂತರ ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ನಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ.ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ
ಘಟನೆಯಲ್ಲಿ ಎರಡು ಲಾರಿಗಳು ಬೆಂಕಿಗೆ ಆಹುತಿಯಾಗಿದ್ದು, ಕೂಡಲೇ ಅಧಿಕಾರಿಗಳು ಅಗ್ನಿಶಾಮಕ ದಳಕ್ಕೆ ಸುದ್ದಿ ತಿಳಿಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. . ಬೆಂಕಿ ಅವಘಡದಲ್ಲಿ 1 ಕೋಟಿ(1crore) ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿ ಹಾನಿಯಾಗಿದೆ ಎನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಆಡಳಿತ ಮಂಡಳಿ ಆದೇಶ ನೀಡಿದೆ. ಅಗ್ನಿ ಅವಘಡದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.