News Karnataka Kannada
Friday, May 03 2024
ಆಂಧ್ರಪ್ರದೇಶ

ಸಿಲಿಂಡರ್ ಸ್ಫೋಟ: 4 ಜನರ ದುರ್ಮರಣ

Untitled 10
Photo Credit :

ಅನಂತಪುರ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟದಿಂದಾಗಿ ಮನೆಯ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಶನಿವಾರ (ಮೇ 28) ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ಅನಂತಪುರದ ಮುಳಕಲೇಡು ಗ್ರಾಮದ ನಿವಾಸದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ.

ಸ್ಫೋಟದ ಪರಿಣಾಮ ಅಕ್ಕಪಕ್ಕದ ಮನೆಯ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದರು” ಎಂದು ಅನಂತಪುರದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಕೀರಪ್ಪ ತಿಳಿಸಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು