ಆಂಧ್ರಪ್ರದೇಶದಲ್ಲಿ ಕಾಲುವೆಗೆ ಬಿದ್ದ ಬಸ್: 7 ಮಂದಿ ದುರ್ಮರಣ

ಅಮರಾವತಿ: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ಕಾಲುವೆಗೆ ಉರುಳಿದ ಪರಿಣಾಮ ಮಗು ಸೇರಿದಂತೆ ಏಳು ಮಂದಿ ಮೃತಪಟ್ಟು, 12 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಅಬ್ದುಲ್ ಅಜೀಜ್ (65), ಅಬ್ದುಲ್ ಹನಿ (60), ಶೇಖ್ ರಮೀಜ್ (48), ಮುಲ್ಲಾ ನೂರ್ ಜಹಾನ್ (58), ಮುಲ್ಲಾ ಜಾನಿ ಬೇಗಂ (65), ಶೇಖ್ ಶಬೀನಾ (35) ಮತ್ತು ಶೇಖ್ ಹಿನಾ (6) ಎಂದು ಗುರುತಿಸಲಾಗಿದೆ.

ಪೊಡಿಲಿಯಿಂದ ಕಾಕಿನಾಡಕ್ಕೆ ತೆರಳುತ್ತಿದ್ದ ಬಸ್ ದರ್ಶಿ ಬಳಿಯ ಸಾಗರ್ ಕಾಲುವೆಗೆ ಬಿದ್ದಿದೆ. ಬಸ್ ನಲ್ಲಿ 35 ರಿಂದ 40 ಜನರಿದ್ದು, ಅವರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಕಾಕಿನಾಡಕ್ಕೆ ಹೋಗುತ್ತಿದ್ದರು.

ಸ್ಥಳಕ್ಕೆ ಧಾವಿಸಿದ ಪೊಲೀಸರು, ಇತರ ಇಲಾಖೆಗಳ ಸಮನ್ವಯದೊಂದಿಗೆ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದ್ದಾರೆ.

ಪೊಲೀಸರ ಪ್ರಕಾರ, ಸರ್ಕಾರಿ ಸ್ವಾಮ್ಯದ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ (ಎಪಿಎಸ್ಆರ್ಟಿಸಿ) ಬಸ್ ಅನ್ನು ಪ್ರಯಾಣಕ್ಕಾಗಿ ಬಾಡಿಗೆಗೆ ತೆಗೆದುಕೊಳ್ಳಲಾಗಿದೆ.

 

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

6 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

7 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

7 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

7 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

7 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

8 hours ago