News Karnataka Kannada
Monday, April 29 2024
ಆಂಧ್ರಪ್ರದೇಶ

ಭಿಕ್ಷುಕನಂತೆ ಬೀದಿ ಬೀದಿ ಸುತ್ತಿದ ಖ್ಯಾತ ನಟ !

ನಿರ್ದೇಶಕ ಶೇಖರ್ ಕಮ್ಮುಲ ಅವರ ಮುಂಬರುವ ಚಿತ್ರದ ಚಿತ್ರೀಕರಣ ತಿರುಪತಿಯಲ್ಲಿ ನಡೆಯುತ್ತಿದೆ. ಈ ಸಿನಿಮಾದಲ್ಲಿ ದಕ್ಷಿಣದ ಸೂಪರ್ ಸ್ಟಾರ್ ಧನುಷ್ ನಟಿಸುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣದ ವೇಳೆ ಧನುಷ್ ವಿಚಿತ್ರವಾಗಿ ಕಾಣಿಸಿಕೊಂಡಿದ್ದು ಜನ ಅಚ್ಚರಿಗೊಂಡಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘D 51’ ಎಂದು ಶೀರ್ಷಿಕೆ ಇಡಲಾಗಿದೆ.
Photo Credit : News Kannada

ಆಂಧ್ರ ಪ್ರದೇಶ: ನಿರ್ದೇಶಕ ಶೇಖರ್ ಕಮ್ಮುಲ ಅವರ ಮುಂಬರುವ ಚಿತ್ರದ ಚಿತ್ರೀಕರಣ ತಿರುಪತಿಯಲ್ಲಿ ನಡೆಯುತ್ತಿದೆ. ಈ ಸಿನಿಮಾದಲ್ಲಿ ದಕ್ಷಿಣದ ಸೂಪರ್ ಸ್ಟಾರ್ ಧನುಷ್ ನಟಿಸುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣದ ವೇಳೆ ಧನುಷ್ ವಿಚಿತ್ರವಾಗಿ ಕಾಣಿಸಿಕೊಂಡಿದ್ದು ಜನ ಅಚ್ಚರಿಗೊಂಡಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘D 51’ ಎಂದು ಶೀರ್ಷಿಕೆ ಇಡಲಾಗಿದೆ.

ತಿರುಪತಿಯ ದೇವಸ್ಥಾನದ ಬಳಿ ಧನುಷ್ ಚಿತ್ರೀಕರಣದ ಹಲವಾರು ಫೋಟೋಗಳು ಮತ್ತು ವೀಡಿಯೊಗಳು ಈಗ ವೈರಲ್‌ ಆಗ್ತಿವೆ. ಅದರಲ್ಲಿ ಅವರು ಹರಿದ ಕೊಳಕು ಚಿಂದಿ ಬಟ್ಟೆ ಧರಿಸಿದರುವುದು ಕಾಣಬಹುದು. ಕೆಲವರು ಈ ವಿಡಿಯೋದಲ್ಲಿ ಕಾಣಿಸಿಕೊಂಡವರು ನಿಜವಾಯೂ ಧನುಷ್ ಅವರೇನಾ ಎಂದು ಅನುಮಾನ ಪಟ್ಟಿದ್ದಾರೆ. ಈ ವಿಡಿಯೋದಲ್ಲಿ ಕಾಣಿಸಿಕೊಂಡ ವ್ಯಕ್ತಿ ನಟನಲ್ಲ ಬದಲಿಗೆ ಭಿಕ್ಷುಕ ಇರಬೇಕು ಎನಿಸುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನು ಶೂಟಿಂಗ್‌ನಿಂದಾಗಿ ತಿರುಪತಿಯಲ್ಲಿ ಟ್ರಾಫಿಕ್ ಜಾಮ್ ನಿರ್ಮಾಣವಾಗಿತ್ತು. ಕೆಲವು ಭಕ್ತರು ಸ್ಥಳದಲ್ಲಿ ಚಿತ್ರೀಕರಣಕ್ಕೆ ಹೇಗೆ ಅನುಮತಿ ನೀಡಿದರು ಎಂದು ಪೊಲೀಸರನ್ನು ಪ್ರಶ್ನಿಸಿದರು. ಬಿಜೆಪಿ ಮುಖಂಡರು ಚಿತ್ರತಂಡದೊಂದಿಗೆ ಅನುಚಿತವಾಗಿ ವರ್ತಿಸಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ. ಸಣ್ಣ ಸಮಸ್ಯೆಯ ಹೊರತಾಗಿಯೂ ತಯಾರಕರು ಚಿತ್ರೀಕರಣವನ್ನು ಮುಗಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು