ಅಮರಾವತಿ: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಪ್ರಕಾಶಂ ಜಿಲ್ಲೆಯ ಕುಂಬಮ್ ಬಳಿ ಹಿಂದಿನಿಂದ ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಎಲ್ಲಾ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಮರಾವತಿ-ಅನಂತಪುರ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಮೂವರು ಮಹಿಳೆಯರು ಸೇರಿದಂತೆ ಮೃತರು ಮಾಚೆರ್ಲಾದಿಂದ ತಿರುಪತಿಗೆ ತೆರಳುತ್ತಿದ್ದರು.
ಮೃತರನ್ನು ಅನಿಮಿ ರೆಡ್ಡಿ (60), ಗುರವಮ್ಮ (60), ಅನಂತಮ್ಮ (55), ಆದಿಲಕ್ಷ್ಮಿ (58) ಮತ್ತು ನಾಗಿ ರೆಡ್ಡಿ (24) ಎಂದು ಗುರುತಿಸಲಾಗಿದೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಶವಗಳನ್ನು ಶವಪರೀಕ್ಷೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಮೃತರು ಪಲ್ನಾಡು ಜಿಲ್ಲೆಯ ವೆಲ್ದುರ್ತಿ ಮಂಡಲದ ಸಿರಿಗಿರಿಪಾಡು ಗ್ರಾಮದವರು.
ಅತಿಯಾದ ವೇಗವು ಅಪಘಾತ ಕಾರಣವಾಯಿತು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣವನ್ನು ದಾಖಲಿಸಿದ್ದಾರೆ ಮತ್ತು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…