News Karnataka Kannada
Friday, April 12 2024
Cricket
ಆಂಧ್ರಪ್ರದೇಶ

ಜನಸೇನಾ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಆಂಧ್ರ ಮಹಿಳಾ ಪೊಲೀಸ್ ಅಧಿಕಾರಿ

woman police
Photo Credit : IANS

ತಿರುಪತಿ, ಜು.12: ಆಂಧ್ರಪ್ರದೇಶದ ಶ್ರೀಕಾಳಹಸ್ತಿ ಪಟ್ಟಣದಲ್ಲಿ ಬುಧವಾರ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜನಸೇನಾ ಪಕ್ಷದ (ಜೆಎಸ್‌ಪಿ) ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ.

ತಿರುಪತಿ ಜಿಲ್ಲೆಯ ಶ್ರೀಕಾಳಹಸ್ತಿ ಪಟ್ಟಣದಲ್ಲಿ ವಿರೋಧ ಪಕ್ಷದ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾಗ ಸರ್ಕಲ್ ಇನ್ಸ್‌ಪೆಕ್ಟರ್ (ಸಿಐ) ಅಂಜು ಯಾದವ್ ಅವರು ಜೆಪಿಎಸ್ ಕಾರ್ಯಕರ್ತನಿಗೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ್ದಾರೆ.

ನಟ ಪವನ್ ಕಲ್ಯಾಣ್ ಪಕ್ಷದ ಕಾರ್ಯಕರ್ತನಿಗೆ ಮಹಿಳಾ ಪೊಲೀಸ್ ಅಧಿಕಾರಿ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಹಿಳಾ ಪೊಲೀಸ್ ತನ್ನ ಎರಡೂ ಕೈಗಳಿಂದ ವ್ಯಕ್ತಿಗೆ ಕಪಾಳಮೋಕ್ಷ ಮಾಡುತ್ತಿರುವುದು ಕಂಡುಬಂದಿದೆ. ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಪ್ರತಿಕೃತಿಯನ್ನು ದಹಿಸದಂತೆ ತಡೆಯಲು ಪೊಲೀಸರು ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ.

ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಎರಡು ಕಡೆಯವರ ನಡುವೆ ಮಾತಿನ ಚಕಮಕಿಯೂ ನಡೆಯಿತು. ಪೊಲೀಸರು ಕೆಲವು ಪ್ರತಿಭಟನಾಕಾರರನ್ನು ಬಂಧಿಸಿದರು.

ಪೊಲೀಸ್ ಅಧಿಕಾರಿಯ ವರ್ತನೆಯನ್ನು ಜೆಎಸ್‌ಪಿ ಮುಖಂಡರು ಖಂಡಿಸಿದ್ದಾರೆ. ಅವರು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಕಾರ್ಯಕರ್ತೆಯಂತೆ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು