ತಿರುಪತಿ, ಜು.12: ಆಂಧ್ರಪ್ರದೇಶದ ಶ್ರೀಕಾಳಹಸ್ತಿ ಪಟ್ಟಣದಲ್ಲಿ ಬುಧವಾರ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜನಸೇನಾ ಪಕ್ಷದ (ಜೆಎಸ್ಪಿ) ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ.
ತಿರುಪತಿ ಜಿಲ್ಲೆಯ ಶ್ರೀಕಾಳಹಸ್ತಿ ಪಟ್ಟಣದಲ್ಲಿ ವಿರೋಧ ಪಕ್ಷದ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾಗ ಸರ್ಕಲ್ ಇನ್ಸ್ಪೆಕ್ಟರ್ (ಸಿಐ) ಅಂಜು ಯಾದವ್ ಅವರು ಜೆಪಿಎಸ್ ಕಾರ್ಯಕರ್ತನಿಗೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ್ದಾರೆ.
ನಟ ಪವನ್ ಕಲ್ಯಾಣ್ ಪಕ್ಷದ ಕಾರ್ಯಕರ್ತನಿಗೆ ಮಹಿಳಾ ಪೊಲೀಸ್ ಅಧಿಕಾರಿ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಹಿಳಾ ಪೊಲೀಸ್ ತನ್ನ ಎರಡೂ ಕೈಗಳಿಂದ ವ್ಯಕ್ತಿಗೆ ಕಪಾಳಮೋಕ್ಷ ಮಾಡುತ್ತಿರುವುದು ಕಂಡುಬಂದಿದೆ. ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಪ್ರತಿಕೃತಿಯನ್ನು ದಹಿಸದಂತೆ ತಡೆಯಲು ಪೊಲೀಸರು ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ.
ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಎರಡು ಕಡೆಯವರ ನಡುವೆ ಮಾತಿನ ಚಕಮಕಿಯೂ ನಡೆಯಿತು. ಪೊಲೀಸರು ಕೆಲವು ಪ್ರತಿಭಟನಾಕಾರರನ್ನು ಬಂಧಿಸಿದರು.
ಪೊಲೀಸ್ ಅಧಿಕಾರಿಯ ವರ್ತನೆಯನ್ನು ಜೆಎಸ್ಪಿ ಮುಖಂಡರು ಖಂಡಿಸಿದ್ದಾರೆ. ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ಕಾರ್ಯಕರ್ತೆಯಂತೆ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…