ಶ್ರೀಹರಿಕೋಟಾ: ಇಸ್ರೋದಿಂದ ಐತಿಹಾಸಿಕ ಚಂದ್ರಯಾನ-3 ಉಡಾವಣೆ ಆಗಿದ್ದು, ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಯಶಸ್ವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಎಂದು ಸತೀಶ್ ಧವನ್ ಕೇಂದ್ರದಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಹೇಳಿದರು.
ಇಸ್ರೋದಿಂದ ಐತಿಹಾಸಿಕ ಚಂದ್ರಯಾನ-3 ಯಶಸ್ವಿ ಉಡಾವಣೆ ಹಿನ್ನೆಲೆ ಇಸ್ರೋ ಅಧ್ಯಕ್ಷ ಸೋಮನಾಥ್ಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶ್ಲಾಘಿಸಿದರು. ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಯಶಸ್ವಿಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದರು. ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಸಂಭ್ರಮ ಮುಗಿಲುಮುಟ್ಟಿದೆ. ಸಹೋದ್ಯೋಗಿಗಳ ಜೊತೆ ಇಸ್ರೋ ಅಧ್ಯಕ್ಷ ಸೋಮನಾಥ್ ಸಂಭ್ರಮಿಸಿದ್ದಾರೆ. ಇಸ್ರೋ ಅಧ್ಯಕ್ಷರಿಗೆ ‘ಚಂದ್ರಯಾನ-3’ ಮಾಡಲ್ನ್ನು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ನೀಡಿದರು.
ಇನ್ನು, ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಚಂದ್ರಯಾನ-3 ಹೊಸ ಅಧ್ಯಾಯ ಬರೆದಿದೆ. ಇದು ಎತ್ತರಕ್ಕೆ ಏರಲಿದ್ದು, ಪ್ರತಿಯೊಬ್ಬ ಭಾರತೀಯನ ಕನಸುಗಳು ಮತ್ತು ಮಹತ್ವಾಕಾಂಕ್ಷೆಗಳನ್ನು ಹೆಚ್ಚಿಸುತ್ತದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ಅವಿರತ ಸಮರ್ಪಣೆಗೆ ಸಾಕ್ಷಿಯಾಗಿದೆ. ಅವರ ಉತ್ಸಾಹ ಮತ್ತು ಜಾಣ್ಮೆಗೆ ನಾನು ನಮಸ್ಕರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.