News Karnataka Kannada
Sunday, May 05 2024
ಆಂಧ್ರಪ್ರದೇಶ

ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಇಂದು ಆಂಧ್ರ ಬಂದ್​ಗೆ ಕರೆ

Chandrababu Naidu
Photo Credit : News Kannada

ಆಂಧ್ರಪ್ರದೇಶ: ತೆಲುಗು ದೇಶಂ ಪಕ್ಷ(ಟಿಡಿಪಿ)ರ ವರಿಷ್ಠ ಚಂದ್ರಬಾಬು ನಾಯ್ಡು ಬಂಧನವನ್ನು ವಿರೋಧಿಸಿ ಟಿಡಿಪಿ ಸೋಮವಾರ ಆಂಧ್ರಪ್ರದೇಶದಾದ್ಯಂತ ಬಂದ್​ಗೆ ಕರೆ ನೀಡಿದೆ.

ಆಂಧ್ರಪ್ರದೇಶದ ಸಿಐಡಿ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ನಾಯ್ಡು ಅವರನ್ನು ಶನಿವಾರ (ಸೆ.8) ಬಂಧಿಸಿತ್ತು. ಅವರನ್ನು ಭಾನುವಾರ (ಸೆ.10) ಬೆಳಗ್ಗೆ ವಿಜಯವಾಡದ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಅವರು ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಖಂಡಿಸಿದರು ಮತ್ತು ಮಾಜಿ ಮುಖ್ಯಮಂತ್ರಿಯನ್ನು ಬೆಂಬಲಿಸಲು ವಿಜಯವಾಡಕ್ಕೆ ತೆರಳಲು ಪ್ರಯತ್ನಿಸಿದರು. ಅವರು ಮೊದಲು ವಿಶೇಷ ವಿಮಾನದಲ್ಲಿ ಹೋಗಲು ಪ್ರಯತ್ನ ಪಟ್ಟರು, ಆದರೆ, ಪೊಲೀಸರು ಅವರನ್ನು ತಡೆದರು.

ಬಳಿಕ ರಸ್ತೆ ಮೂಲಕ ವಿಜಯವಾಡಕ್ಕೆ ತೆರಳಲು ಆರಂಭಿಸಿದ ಪೊಲೀಸರು ಆತನ ಬೆಂಗಾವಲು ವಾಹನವನ್ನು ತಡೆದು ವಶಕ್ಕೆ ತೆಗೆದುಕೊಂಡರು. ಪೊಲೀಸರು ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ.

ಬಹುಕೋಟಿ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ವಿಜಯವಾಡದ ಸ್ಥಳೀಯ ನ್ಯಾಯಾಲಯವು ಭಾನುವಾರ ಚಂದ್ರಬಾಬು ನಾಯ್ಡು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು