ಆಂಧ್ರ ಪ್ರದೇಶ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ಆಂಧ್ರ ಪ್ರದೇಶ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಕೌಶಲ್ಯಾಭಿವೃದ್ಧಿ ಯೋಜನೆ ಹಗರಣದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿತ್ತು, ನಾಲ್ಕು ವಾರಗಳ ಜಾಮೀನನ್ನು ಮಂಜೂರು ಮಾಡಲಾಗಿದೆ, ಅನಾರೋಗ್ಯ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿರುವ ಕಾರಣ, ನವೆಂಬರ್ 24ರವರೆಗೆ ನಾಯ್ಡುಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕೌಶಲ್ಯ ಅಭಿವೃದ್ಧಿ ನಿಗಮದಿಂದ 300 ಕೋಟಿ ರೂ.ಗೂ ಹೆಚ್ಚು ನಷ್ಟಕ್ಕೆ ಕಾರಣವಾದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಸೆ.9 ರಂದು ಬಂಧಿಸಿದೆ.