News Karnataka Kannada
Saturday, May 18 2024
ಆಂಧ್ರಪ್ರದೇಶ

ಚಂದ್ರಯಾನ-3 ಯಶಸ್ವಿ ಉಡಾವಣೆ: ವಿಜ್ಞಾನಿಗಳಿಗೆ ಅಭಿನಂದಿಸಿದ ರಾಷ್ಟ್ರ ನಾಯಕರು

ISRO
Photo Credit : News Kannada

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ನೌಕೆಯನ್ನು ಇಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ. ನೌಕೆ ಆಗಸ್ಟ್​ 23 ಅಥವಾ 24ರಂದು ಚಂದ್ರನ ಅಂಗಳಕ್ಕೆ ತಲುಪಲಿದೆ.

ಇಸ್ರೋ ವಿಜ್ಞಾನಿಗಳ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್​, ಸಚಿನ್ ತೆಂಡೂಲ್ಕರ್​ ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ​

ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಚಂದ್ರಯಾನ-3 ಹೊಸ ಅಧ್ಯಾಯ ಬರೆದಿದೆ. ಇದು ಎತ್ತರಕ್ಕೆ ಏರಲಿದ್ದು, ಪ್ರತಿಯೊಬ್ಬ ಭಾರತೀಯನ ಕನಸುಗಳು ಮತ್ತು ಮಹತ್ವಾಕಾಂಕ್ಷೆಗಳನ್ನು ಹೆಚ್ಚಿಸುತ್ತದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ಅವಿರತ ಸಮರ್ಪಣೆಗೆ ಸಾಕ್ಷಿಯಾಗಿದೆ. ಅವರ ಉತ್ಸಾಹ ಮತ್ತು ಜಾಣ್ಮೆಗೆ ನಾನು ನಮಸ್ಕರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

https://twitter.com/CMofKarnataka/status/1679786027848966145?ref_src=twsrc%5Etfw%7Ctwcamp%5Etweetembed%7Ctwterm%5E1679786027848966145%7Ctwgr%5Ec707f463097b14d364ecf123ca0ea75992facba0%7Ctwcon%5Es1_&ref_url=https%3A%2F%2Ftv9kannada.com%2Fnational%2Fchandrayaan-3-launch-live-updates-from-satish-dhawan-space-centre-in-sriharikota-in-andhra-pradesh-latest-news-vkb-622525.html

ಸಿಎಂ ಸಿದ್ದರಾಮಯ್ಯ ಟ್ವೀಟ್​ ಮೂಲಕ ವಿಜ್ಞಾನಿಗಳಿಗೆ ಅಭಿನಂದಿಸಿದ್ದಾರೆ. ಇದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲಾಗಿದೆ. ಈ ಸಾಧನೆಯು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಕೈಗೊಳ್ಳಲು ಭಾರತದ ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದಿದ್ದಾರೆ.

https://twitter.com/rashtrapatibhvn/status/1679789508487946240?ref_src=twsrc%5Etfw%7Ctwcamp%5Etweetembed%7Ctwterm%5E1679789508487946240%7Ctwgr%5E6492ada926a94aeee79dfa7b88311a730fdc8466%7Ctwcon%5Es1_&ref_url=https%3A%2F%2Ftv9kannada.com%2Fnational%2Fchandrayaan-3-launch-live-updates-from-satish-dhawan-space-centre-in-sriharikota-in-andhra-pradesh-latest-news-vkb-622525.html

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು