ಚಂದ್ರಯಾನ-3: ಚಂದ್ರಯಾನ ಯೋಜನೆಯಿಂದ ದೇಶಕ್ಕೇನು ಲಾಭ?

ಶ್ರೀಹರಿಕೋಟಾ: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ.

ಇನ್ನು ಈ ಚಂದ್ರಯಾನ 3 ಯೋಜನೆ ಯಶಸ್ವಿಯಾದರೆ ಚಂದ್ರನ ಮೇಲೆ ನೌಕೆ ಇಳಿಸಿದ 4ನೇ ದೇಶ ಅನ್ನೋ ಹೆಗ್ಗಳಿಕೆ ಭಾರತಕ್ಕೆ ಸಿಗಲಿದೆ. ಇವರೆಗೆ ಅಮೆರಿಕ, ರಷ್ಯಾ ಹಾಗೂ ಚೀನಾ ದೇಶಗಳು ಮಾತ್ರ ಚಂದ್ರನ ಮೇಲೆ ನೌಕೆ ಇಳಿಸಿವೆ. ಇನ್ನು ಈ ಯೋಜನೆ ಯಶಸ್ವಿಯಾದರೆ, ಭಾರತದ ಆಂತರಿಕ್ಷ ವಿಜ್ಞಾನ ವಲಯಕ್ಕೆ ಬೂಸ್ಟ್‌ ಸಿಗುತ್ತದೆ. ಉಪಗ್ರಹ ಉಡಾವಣೆ ಸೇರಿದಂತೆ ಹಲವು ವಿಚಾರಗಳಿಗೆ ವಿಶ್ವದ ಹಲವು ರಾಷ್ಟ್ರಗಳು ಭಾರತವನ್ನೇ ಅವಲಂಬಿಸಲಿವೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಹೂಡಿಕೆ ಇನ್ನಷ್ಟು ಹೆಚ್ಚಾಗಲಿದೆ. ಎಲ್ಲಕ್ಕಿಂತಾ ಮುಖ್ಯವಾಗಿ ಇಸ್ರೋ ಮೇಲಿನ ನಂಬಿಕೆ ಇನ್ನಷ್ಟು ಹೆಚ್ಚಾಗಲಿದೆ.

4 ವರ್ಷಗಳ ಹಿಂದೆ 2019ರಲ್ಲಿ ಚಂದ್ರಯಾನ 2 ಯೋಜನೆ ಆರಂಭವಾದಾಗ ಕೂಡಾ ಇದೇ ಸಂಭ್ರಮ ಮನೆ ಮಾಡಿತ್ತು. ರಾಕೆಟ್ ಯಶಸ್ವಿಯಾಗಿ ಹಾರಿತ್ತು. ಆದ್ರೆ, ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಇಳಿಯುವಾಗ ಮಾತ್ರ ಎಡವಟ್ಟಾಗಿತ್ತು. ಈ ಬಾರಿ ಆ ರೀತಿಯ ತಪ್ಪುಗಳು ಮರುಕಳಿಸದಂತೆ ಇಸ್ರೋ ವಿಜ್ಞಾನಿಗಳು ವಿನ್ಯಾಸ ಮಾಡಿದ್ದಾರೆ.

Ashitha S

Recent Posts

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

6 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

27 mins ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

34 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

48 mins ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

56 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

60 mins ago