ಆದಿತ್ಯ ಎಲ್‌ 1 ಉಪಗ್ರಹ ಉಡಾವಣೆಗೆ ಕ್ಷಣಗಣನೆ

ಶ್ರೀಹರಿಕೋಟ: ಸೂರ್ಯನ ಅಧ್ಯಯನಕ್ಕಾಗಿ ಇಸ್ರೋ ಮಹತ್ವಕಾಂಕ್ಷೆಯ ಆದಿತ್ಯ ಎಲ್‌ 1 ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ.

ಈ ಕುರಿತು ಇಸ್ರೋ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಹಂಚಿಕೊಂಡಿದೆ. ಶನಿವಾರ ಬೆಳಗ್ಗೆ 11.50ಕ್ಕೆ ಶ್ರೀಹರಿಕೋಟದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್‌ 1 ಉಪಗ್ರಹ ಹೊತ್ತ ಪಿಎಸ್‌ಎಲ್‌ವಿ-ಸಿ 57 ರಾಕೆಟ್‌ ನಭಕ್ಕೆ ಚಿಮ್ಮಲಿದೆ. ಈ ಉಡಾವಣೆಯನ್ನು ಸಾರ್ವಜನಿಕರು ಕೂಡ ನೇರವಾಗಿ ವೀಕ್ಷಣೆ ಮಾಡಬಹುದು. ಇಂದು ಬೆಳಿಗ್ಗೆ 11.50ಕ್ಕೆ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳ್ಳುವ ಆದಿತ್ಯ ಎಲ್‌ -1 ಅನ್ನು ಲಾಂಚ್ ವೀವ್‌ ಗ್ಯಾಲರಿಯಿಂದ್ ನೇರವಾಗಿ ವಿಕ್ಷಿಸಲು ಇಸ್ರೋ ಸಾರ್ವಜನಿಕರಿಗೆ ಅವಕಾಶ ನೀಡಿದೆ. ಇದಕ್ಕೆ ಇಸ್ರೋ ವೆಬ್ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಸೂರ್ಯನ ಮೇಲಿನ ವಾತಾವರಣ ಅಧ್ಯಯನವೇ ಇದರ ಪ್ರಮುಖ ಗುರಿಯಾಗಿದೆ. ಕೊರೊನಾ ಅಂದರೇ ಸೂರ್ಯನ ಮೇಲ್ಮೈ ಭಾಗ ಹಾಗೂ ಕ್ರೋಸ್ಮೋಸ್ಪಿಯರ್ ಅಂದರೇ ಸೂರ್ಯನ ಮಧ್ಯಭಾಗ ಮತ್ತು ಪೋಟೋಸ್ಪಿಯರ್ ಸೂರ್ಯನ ಕೇಳಭಾಗ ಪ್ರದೇಶವನ್ನು ಅಧ್ಯಯನ ಮಾಡಲು ಇಸ್ರೋ ಸಜ್ಜಾಗಿದೆ.

ಸೂರ್ಯನ ಕರೋನಾ ಭಾಗ ಸಾಕಷ್ಟು ವಿಸ್ಮಯಗಳಿಂದ ಕೂಡಿದ್ದು ಇದರ ಇಂಚಿಂಚು ಮಾಹಿತಿಯನ್ನು ಜಗತ್ತಿಗೆ ತಿಳಿಸಲು ಇಸ್ರೋ ಮುಂದಾಗಿದೆ. ಸೂರ್ಯನ ಕರೋನಾ ಬಿಸಿಯಾಗುವ ಬಗ್ಗೆ, ಸೌರ ಮಾರುತ ಹೇಗೆ ಎದ್ದೇಳಲಿದೆ ಎನ್ನುವ ಬಗ್ಗೆ ನೌಕೆ ಅಧ್ಯಯನ ಮಾಡಲಿದೆ.

Ashika S

Recent Posts

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

8 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

32 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

44 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

1 hour ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

1 hour ago