ಆಂಧ್ರಪ್ರಧೇಶ: ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿ ಹೊತ್ತಿ ಉರಿದು ಭಸ್ಮವಾಗಿದೆ. ಈ ಘಟನೆ ತಡರಾತ್ರಿ ಆಂಧ್ರಪ್ರದೇಶದಲ್ಲಿ ನಡೆದಿದೆ.ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ ಈ ರೀತಿಯಾಗಿ ಸೇಡು ತೀರಿಸಿಕೊಂಡಿದೆ ಎಂದು ಆರೋಪಿಸಿದೆ.
ಟಿಡಿಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಪೆಡಕುರಪಾಡುದಲ್ಲಿ ಸಾರ್ವಜನಿಕ ಸಭೆಯನ್ನು ಮುಗಿಸಿದ ಕೂಡಲೇ ಈ ಘಟನೆ ಸಂಭವಿಸಿದೆ. ಕಚೇರಿ ಸಂಪೂರ್ಣ ಹೊತ್ತಿ ಉರಿಯುತ್ತಿರುವ ವಿಡಿಯೋಗಳು ವೈರಲ್ ಆಗಿವೆ.
ಟಿಡಿಪಿ ಮುಖಂಡ ಮತ್ತು ಪೆದಕೂರಪಾಡು ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಭಾಷ್ಯಂ ಪ್ರವೀಣ್, ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಈ ಕೃತ್ಯಕ್ಕೆ ಕಾರಣವಾದವರನ್ನು ಕೂಡಲೆ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.ರಾಜಕೀಯ ವಿಧ್ವಂಸಕ ಕೃತ್ಯದ ವಿರುದ್ಧ ಔಪಚಾರಿಕ ದೂರು ದಾಖಲಿಸಲಾಗುವುದು ಎಂದು ಭಾಷ್ಯಂ ಪ್ರವೀಣ್ ತಿಳಿಸಿದ್ದಾರೆ.