ಅಮರಾವತಿ: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮಿಚಾಂಗ್ ಚಂಡ ಮಾರುತ ಆಂಧ್ರ ಕರಾವಳಿಯತ್ತ ಸಾಗುತ್ತಿದ್ದು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರಿ ಮಳೆಯಾಗುತ್ತಿದೆ.
ಚಂಡಮಾರುತದ ಪ್ರಭಾವದಿಂದ ಸೋಮವಾರ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿ ಸಮೀಪವಿರುವ ಎಂಟು ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಆಂಧ್ರ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ಪೂರ್ವಭಾವಿ ಸಭೆ ನಡೆಸಿದ್ದು, ಚಂಡ ಮಾರುತ ಎದುರಿಸಲು ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.