News Karnataka Kannada
Monday, April 29 2024
ಆಂಧ್ರಪ್ರದೇಶ

ಆಂಧ್ರ ಪ್ರದೇಶ: ಅನಿಲ ಸೋರಿಕೆ ಉಂಟಾಗಿ 50ಕ್ಕೂ ಅಧಿಕ ಮಹಿಳಾ ಕಾರ್ಮಿಕರು ಅಸ್ವಸ್ಥ

Danger Freepik
Photo Credit : Freepik

ಆಂಧ್ರ ಪ್ರದೇಶ: ಆಂಧ್ರ ಪ್ರದೇಶದ ವಿಶೇಷ ಆರ್ಥಿಕ ವಲಯ (ಎಸ್‌ಇಝೆಡ್‌)ದಲ್ಲಿರುವ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆ ಉಂಟಾಗಿ 50ಕ್ಕೂ ಅಧಿಕ ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ.

ಬ್ರಾಂಡಿಕ್ಸ್ ಎಸ್‌ಇಝೆಡ್‌ನಲ್ಲಿ ಉಡುಪು ತಯಾರಿಕಾ ಘಟಕದಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಅನಿಲ ಸೋರಿಕೆಯಿಂದಾಗಿ ಅಸ್ವಸ್ಥಗೊಂಡ ಕಾರ್ಮಿಕರನ್ನು ಸ್ಥಳೀಯ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನಿಲ ಸೋರಿಕೆಗೆ ತಕ್ಷಣದ ಕಾರಣವೇನು ಎನ್ನುವುದು ತಿಳಿದುಬಂದಿಲ್ಲ, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು