News Karnataka Kannada
Monday, April 29 2024
ಆಂಧ್ರಪ್ರದೇಶ

ಟೊಮೆಟೊ ಮಾರಿದ 30 ಲಕ್ಷ ರೂ. ಹಣದ ಮೇಲೆ ಕಣ್ಣಿಟ್ಟು ರೈತನ ಕೊಲೆ

Rs 30 lakh for selling tomatoes. Farmer murdered with eyes on money
Photo Credit : IANS

ಅಮರಾವತಿ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಟೊಮೆಟೊ ಮಾರಾಟ ಮಾಡಿ ಬಂದ ಹಣದ ಮೇಲಿನ ಆಸೆಯಿಂದ ರೈತನೊಬ್ಬನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಮದನಪಲ್ಲಿ ಮಂಡಲದ ಬೋಡಿಮಲ್ಲದಿನ್ನೆ ಗ್ರಾಮದಲ್ಲಿ ಬುಧವಾರ ನರೇಂ ರಾಜಶೇಖರ್ ರೆಡ್ಡಿ (62) ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಂಗಳವಾರ ರಾತ್ರಿ ಹಾಲು ನೀಡಲು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರೈತ ನರಂ ರಾಜಶೇಖರ್‌ ರೆಡ್ಡಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಆತನ ಕೈಕಾಲುಗಳನ್ನು ರೇಷ್ಮೆ ದಾರದಿಂದ ಕಟ್ಟಿ ಟವೆಲ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.
ಈ ಹಿಂದೆ ಟೊಮೆಟೊ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳು ಜಮೀನಿಗೆ ಬಂದಿದ್ದರು ಎಂದು ಆತನ ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ.

ಟೊಮೆಟೊ ಬೆಲೆ ಗಗನಕ್ಕೇರಿದ್ದು, ರೈತ ರಾಜಶೇಖರ್‌ ಟೊಮೆಟೊ ಮಾರಾಟ ಮಾಡಿ 30 ಲಕ್ಷ ಆದಾಯ ಗಳಿಸಿದ್ದ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಕೊಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದು ತನಿಖೆ ಮುಂದುವರಿದಿದೆ. ಪ್ರಕರಣವನ್ನು ಭೇದಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಕೇಶಪ್ಪ ತಿಳಿಸಿದ್ದಾರೆ.

3-4 ಮಂದಿ ಕೊಲೆ ಮಾಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ ರಾವ್ ಭೇಟಿ ನೀಡಿ ಸಂತ್ರಸ್ತೆಯ ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ್ದಾರೆ. ರೈತ ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇಬ್ಬರು ಹೆಣ್ಣುಮಕ್ಕಳು ಮದುವೆಯಾಗಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು