ಆಂಧ್ರಪ್ರದೇಶ: ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀಶೈಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ದೇವಸ್ಥಾನದ ಬಳಿ ಇರುವ 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಲ್ಲಿ 2 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳು ನಾಶವಾಗಿವೆ,.
ತಡರಾತ್ರಿ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ, ಶಾರ್ಟ್ಸರ್ಕ್ಯೂಟ್ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ.
ಸದಾ ಭಕ್ತರಿಂದ ತುಂಬಿ ತುಳುಕುವ ಶ್ರೀಶೈಲ ದೇವಸ್ಥಾನದ ಅಂಗಡಿಗಳಲ್ಲಿ ಬುಧವಾರ ಮಧ್ಯರಾತ್ರಿಯ ನಂತರ ಬೆಂಕಿ ಕಾಣಿಸಿಕೊಂಡಿದೆ.