ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಇಂಜಿನಿಯರಿಂಗ್ ವಿದ್ಯಾರ್ಥಿನಿ

ಆಂಧ್ರಪ್ರದೇಶ: ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.

3 ತಿಂಗಳ ಹಿಂದೆ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದ ಇಂಜಿನಿಯರಿಂಗ್ ಕಾಲೇಜಿಗೆ ವಿದ್ಯಾರ್ಥಿನಿಯೊಬ್ಬಳು ಸೇರಿಕೊಂಡಿದ್ದಾಳೆ. ಹೆರಿಗೆಯಾಗುವವರೆಗೂ ಆಕೆ ಗರ್ಭಿಣಿ ಎಂದು ವಿದ್ಯಾರ್ಥಿಗಳಿಗೆ ತಿಳಿದಿರಲಿಲ್ಲ. ಕಾಲೇಜು ಆಡಳಿತ ಮಂಡಳಿ ಗುರುತಿಸದಿರುವುದು ಗಮನಾರ್ಹ.

ಸಿವಿಲ್ ಇಂಜಿನಿಯರಿಂಗ್ ಎರಡನೇ ವರ್ಷ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಹೊಟ್ಟೆ ನೋವು ಎಂದು ಶುಕ್ರವಾರ ತಡರಾತ್ರಿ ಪೋಷಕರಿಗೆ ಕರೆ ಮಾಡಿದ್ದಾಳೆ.

ಪೋಷಕರು ಹಾಸ್ಟೆಲ್​ಗೆ ಓಡೋಡಿ ಬಂದಿದ್ದಾರೆ, ಆದರೆ, ಹೊಟ್ಟೆ ನೋವು ಉಲ್ಬಣಗೊಂಡಿದ್ದರಿಂದ ರಾತ್ರಿ 9 ಗಂಟೆಗೆ ವಿದ್ಯಾರ್ಥಿನಿ ಬಾತ್ ರೂಮಿಗೆ ಹೋಗಿದ್ದಾಳೆ. ಸ್ವಲ್ಪ ಸಮಯವಾದರೂ ಹೊರಗೆ ಬರದ ಕಾರಣ, ಆಗಲೇ ಹಾಸ್ಟೆಲ್‌ಗೆ ಬಂದಿದ್ದ ವಿದ್ಯಾರ್ಥಿನಿಯ ಸ್ನೇಹಿತರು ಹಾಗೂ ಪೋಷಕರು ಬಾಗಿಲು ಒಡೆದಿದ್ದಾರೆ.

ವಿದ್ಯಾರ್ಥಿನಿ ಸ್ನಾನಗೃಹದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ವಿದ್ಯಾರ್ಥಿಯ ಪೋಷಕರು ಹಾಗೂ ಕಾಲೇಜು ಸಿಬ್ಬಂದಿ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ವೈದ್ಯರ ಸಲಹೆಯಂತೆ ಉತ್ತಮ ಚಿಕಿತ್ಸೆಗಾಗಿ ಕರ್ನೂಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ತೀವ್ರ ರಕ್ತಸ್ರಾವದಿಂದ ವಿದ್ಯಾರ್ಥಿನಿ ಶನಿವಾರ ಮೃತಪಟ್ಟಿದ್ದಾಳೆ. ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Ashika S

Recent Posts

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

15 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

38 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

56 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

1 hour ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

1 hour ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

9 hours ago