ಆಂಧ್ರಪ್ರದೇಶ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವೈ ಎಸ್ ಆರ್ಸಿಪಿ ಎದುರು ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಒಟ್ಟಾಗಿ ಸ್ಪರ್ಧೆ ಮಾಡಲಿವೆ ಎಂದು ಜನಸೇನಾ ಮುಖ್ಯಸ್ಥ ಹಾಗೂ ನಟ ಪವನ್ ಕಲ್ಯಾಣ್ ಹೇಳಿದ್ದಾರೆ.
ಬಹುಕೋಟಿ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ಬಳಿಕ ಅವರು ಮಾತನಾಡಿದರು.
ಚಂದ್ರ ಬಾಬು ನಾಯ್ಡು ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿದ್ದಾರೆ. ವೈಎಸ್ ಆರ್ಪಿ ದುರಾಡಳಿತವನ್ನು ಸಹಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪ್ರಬಲ ಹೋರಾಟ ನಡೆಸಲಾಗುವುದು ಎಂದು ಕಲ್ಯಾಣ್ ಹೇಳಿದರು.
ಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಕಳೆದ ಶನಿವಾರ ಮುಂಜಾನೆ ನಂದ್ಯಾಲ್ ಪೊಲೀಸರು ಬಂಧಿಸಿದ್ದು, ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ ಚಂದ್ರಬಾಬು ನಾಯ್ಡು ಅವರು ಎ1 ಆರೋಪಿ ಎಂದು ಡಿಐಜಿ ರಘುರಾಮಿ ರೆಡ್ಡಿ ತಿಳಿಸಿದ್ದರು. ಅವರ ಮೇಲೆ ಐಪಿಸಿ ಸೆಕ್ಷನ್ 120 (8), 166, 167, 418, 420, 465, 468, 471, 409 ರ ಅಡಿಯಲ್ಲಿ ಬಂಧಿಸಲಾಗಿದೆ.