ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ, ಜನಸೇನಾ ಮೈತ್ರಿ: ಪವನ್‌ ಕಲ್ಯಾಣ್‌

ಆಂಧ್ರಪ್ರದೇಶ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವೈ ಎಸ್‌ ಆರ್ಸಿಪಿ ಎದುರು ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಒಟ್ಟಾಗಿ ಸ್ಪರ್ಧೆ ಮಾಡಲಿವೆ ಎಂದು ಜನಸೇನಾ ಮುಖ್ಯಸ್ಥ ಹಾಗೂ ನಟ ಪವನ್‌ ಕಲ್ಯಾಣ್‌ ಹೇಳಿದ್ದಾರೆ.

ಬಹುಕೋಟಿ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ಬಳಿಕ ಅವರು ಮಾತನಾಡಿದರು.

ಚಂದ್ರ ಬಾಬು ನಾಯ್ಡು ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿದ್ದಾರೆ. ವೈಎಸ್‌ ಆರ್‌ಪಿ ದುರಾಡಳಿತವನ್ನು ಸಹಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪ್ರಬಲ ಹೋರಾಟ ನಡೆಸಲಾಗುವುದು ಎಂದು ಕಲ್ಯಾಣ್‌ ಹೇಳಿದರು.

ಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಕಳೆದ ಶನಿವಾರ ಮುಂಜಾನೆ ನಂದ್ಯಾಲ್ ಪೊಲೀಸರು ಬಂಧಿಸಿದ್ದು, ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ ಚಂದ್ರಬಾಬು ನಾಯ್ಡು ಅವರು ಎ1 ಆರೋಪಿ ಎಂದು ಡಿಐಜಿ ರಘುರಾಮಿ ರೆಡ್ಡಿ ತಿಳಿಸಿದ್ದರು. ಅವರ ಮೇಲೆ ಐಪಿಸಿ ಸೆಕ್ಷನ್ 120 (8), 166, 167, 418, 420, 465, 468, 471, 409 ರ ಅಡಿಯಲ್ಲಿ ಬಂಧಿಸಲಾಗಿದೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago