ಆಂಧ್ರಪ್ರದೇಶ : ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿಯ ದೇವರಪಲ್ಲಿ ಮಂಡಲದಲ್ಲಿ ಮಂಗಳವಾರ ನಡೆದಿದೆ.
ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯ ವೈದ್ಯರು ಇನ್ನೊಬ್ಬ ಮಹಿಳೆಯ ಸಾವನ್ನು ದೃಢಪಡಿಸಿದ್ದು ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.