News Karnataka Kannada
Tuesday, April 30 2024
ಆಂಧ್ರಪ್ರದೇಶ

ಆಂಧ್ರಪ್ರದೇಶ: ರಸ್ತೆ ಅಪಘಾತದಲ್ಲಿ ದಂಪತಿ ಸೇರಿದಂತೆ ಮೂವರು ಸಾವು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ರೈತನ ಜಮೀನಿಗೆ ಬಿದ್ದಿದೆ.
Photo Credit : Freepik

ಅಮರಾವತಿ, ನ.20: ಆಂಧ್ರಪ್ರದೇಶದ ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಂಪತಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಚನ್ನಾರೆಡ್ಡಿಪಲ್ಲೆ ಗ್ರಾಮದ ಬಳಿ ಕಡಪ-ತಾಡಿಪತ್ರಿ ಹೆದ್ದಾರಿಯಲ್ಲಿ ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಮತ್ತು ಇಬ್ಬರೂ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ದಸ್ತಗಿರಿ (45) ಮತ್ತು ಅವರ ಪತ್ನಿ ಸರಸ್ವತಿ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ತ್ರಿಚಕ್ರ ವಾಹನ ಚಾಲಕ ಪ್ರೇಮ್ ಕುಮಾರ್ (32) ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಕೊಂಡಪುರಂ ಮಂಡಲದ ದತ್ತಾಪುರಂ ಗ್ರಾಮದವರಾದ ದಂಪತಿಗಳು ಸರಸ್ವತಿಯ ಚಿಕಿತ್ಸೆಗಾಗಿ ನೆರೆಯ ಹಳ್ಳಿಗೆ ಭೇಟಿ ನೀಡಿ ಮನೆಗೆ ಮರಳುತ್ತಿದ್ದರು.

ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಟ್ರಕ್ ಚಾಲಕ ವಾಹನದ ನಿಯಂತ್ರಣವನ್ನು ಕಳೆದುಕೊಂಡು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು