News Karnataka Kannada
Monday, April 29 2024
ದೇಶ

ಕೋಟಾದಲ್ಲಿ ಮತ್ತೊಬ್ಬ ಜೆಇಇ ಆಕಾಂಕ್ಷಿ ಆತ್ಮಹತ್ಯೆ !

Kota
Photo Credit : News Kannada

ಕೋಟಾ : ಭಾರತದ ಕೋಚಿಂಗ್ ಹಬ್ ಕೋಟಾದಲ್ಲಿ ಓದುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ಇಂದು ಸೆಲ್ಫೋಸ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೆಇಇ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ, ತನ್ನ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿದ್ಯಾರ್ಥಿಯ  ಡೆತ್‌ ನೋಟ್  ಪತ್ತೆಯಾಗಿದ್ದು ಅದರಲ್ಲಿ  “ಅಪ್ಪಾ, ನನಗೆ ಜೆಇಇ ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಮತ್ತು ನಾನು ಜೆಇಇ ತೇರ್ಗಡೆಯಾಗಲು ಸಾಧ್ಯವಾಗುವುದಿಲ್ಲ. ಹೀಗಾಗಿ ಆತ್ಮಹತ್ಯೆಗೆ ಶರಣಾಗಿರುವೆ ಎಂದು  ಬರೆದಿರುವುದಾಗಿ ತಿಳಿದು ಬಂದಿದೆ.

ವಿದ್ಯಾರ್ಥಿ ಬಿಹಾರದ ಭಾಗಲ್ಪುರ್ ಮೂಲದವನಾಗಿದ್ದು, ಕಳೆದ ವರ್ಷದಿಂದ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ. ಅವರು ಕಳೆದ ಒಂದು ತಿಂಗಳಿನಿಂದ ಕೋಟಾದ ವಿಜ್ಞಾನ ನಗರ ಪ್ರದೇಶದಲ್ಲಿ ವಾಸಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು