News Karnataka Kannada
Thursday, April 18 2024
Cricket
ದೇಶ

ಜ್ಞಾನವಾಪಿ ಕೇಸ್‌ನಲ್ಲಿ ಹಿಂದುಗಳಿಗೆ ಮತ್ತೊಂದು ಜಯ

Majjjd
Photo Credit : News Kannada

ನವದೆಹಲಿ:  ಜ್ಞಾನವಾಪಿ ಮಸೀದಿಯ ಕೆಳಮಹಡಿಯಲ್ಲಿ ಹಿಂದುಗಳಿಗೆ ಪೂಜೆ ಮಾಡಲು ಅವಕಾಶ ಕಲ್ಪಿಸಿರುವ ವಾರಣಾಸಿ ಜಿಲ್ಲಾ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಅಲಹಾಬಾದ್‌ ಹೈಕೋರ್ಟ್‌ಗೆ ಏರಿದ್ದ ಮಸೀದಿ ಸಮಿತಿಗೆ ಹಿನ್ನಡೆಯಾಗಿದೆ.  ಜ್ಞಾನವಾಪಿ ಮಸೀದಿಯ ಕೆಳ ಮಹಡಿಯಲ್ಲಿ ಹಿಂದುಗಳ ಪೂಜೆಗೆ ಯಾವುದೇ ರೀತಿಯ ತಡೆ ನೀಡಲು ಸಾಧ್ಯವಿಲ್ಲ ಎಂದು ಅಲಹಾಬಾದ್‌ ಹೈಕೋರ್ಟ್‌ ಇಂದು(ಫೆ.02) ತಿಳಿಸಿದೆ.

ಅಲಹಾಬಾದ್ ಹೈಕೋರ್ಟ್‌ನಲ್ಲಿ ಜ್ಞಾನವಾಪಿ ಪ್ರಕರಣದ ಇಂದಿನ ವಿಚಾರಣೆ ಪೂರ್ಣಗೊಂಡಿದ್ದು, ಈ ಸಮಯದಲ್ಲಿ ಮಸೀದಿ ಸಮಿತಿಗೆ ಹೈಕೋರ್ಟ್‌ನಿಂದ ಯಾವುದೇ ಪರಿಹಾರ ಸಿಕ್ಕಿಲ್ಲ. ಇದರಿಂದಾಗಿ ಜ್ಞಾನವಾಪಿಯಲ್ಲಿರುವ ನೆಲಮಾಳಿಗೆಯಲ್ಲಿ ಹಿಂದುಗಳ ಪೂಜೆ ಮುಂದುವರಿಯುತ್ತದೆ. ಮುಂದಿನ ವಿಚಾರಣೆ ಫೆಬ್ರವರಿ 6 ರಂದು ಹೈಕೋರ್ಟ್‌ನಲ್ಲಿ ನಡೆಯಲಿದೆ. ಮಸೀದಿ ಸಮಿತಿಯು ತನ್ನ ಅರ್ಜಿಯಲ್ಲಿ ಪೂಜಾ ಸೇವೆಗಳಿಗೆ ಮಧ್ಯಂತರ ನಿಷೇಧವನ್ನು ಕೋರಿತ್ತು, ಆದರೆ ನ್ಯಾಯಾಲಯವು ಈ ಅನುಮತಿ ನೀಡಿಲ್ಲ.

ಫೆಬ್ರುವರಿ 6 ರೊಳಗೆ ತನ್ನ ಮನವಿಯನ್ನು ತಿದ್ದುಪಡಿ ಮಾಡುವಂತೆ ನ್ಯಾಯಾಲಯವು ಮಸೀದಿ ಸಮಿತಿಯನ್ನು ಕೇಳಿದೆ. ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನ್ಯಾಯಾಲಯ ಆಡಳಿತಕ್ಕೆ ಆದೇಶ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು