Categories: ದೇಶ

ಸಂವಿಧಾನ ವಿಧಿ 370 ರದ್ದು: ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು

ಶ್ರೀನಗರ: 2019 ರಲ್ಲಿ ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಮಾಡುವ ಮೂಲಕ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿತ್ತು.
ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದವು. ಹಲವು ಸುತ್ತಿನ ವಾದ-ವಿವಾದಗಳ ನಂತರ ಇಂದು ಸುಪ್ರೀಂ ಕೋರ್ಟ್ ಈ ವಿಷಯಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಿದೆ.

ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಈ ಹಿನ್ನೆಲೆಯಲ್ಲಿ ಇಂದು ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು ತೀವ್ರ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ, ನಾವು ಯಾವ ಭರವಸೆ ಇಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಅಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದೇವೆಯೋ ಅದೇ ಭರವಸೆ ಇಂದು ಕೂಡ ಇದೆ.

ನಮಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದಿದ್ದಾರೆ. ಒಂದು ವೇಳೆ ಸುಪ್ರೀಂ ಕೋರ್ಟ್ ತೀರ್ಪು ನಮ್ಮ ವಿರುದ್ಧವಾಗಿ ಬಂದರೆ ಸಂವಿಧಾನದ ಚೌಕಟ್ಟಿನೊಳಗೆ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸಲು ಶಾಂತಿಯುತವಾಗಿ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.

Ashitha S

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

1 hour ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

1 hour ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

2 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

2 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

2 hours ago