ಅಸ್ಸಾಂ : ಅಸ್ಸಾಂ ನಲ್ಲಿ ಪಾಕಿಸ್ತಾನದ ಗೂಢಾಚಾರ ಸಂಸ್ಥೆ ಐಎಸ್ ಐ ಹಾಗೂ ಭಯೋತ್ಪಾದಕ ಸಂಘಟನೆ ಅಲ್ ಖೈದಾದಿಂದ ದಾಳಿಯಾಗುವ ಬಗ್ಗೆ ರಾಜ್ಯ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಮತ್ತು ಅಸ್ಸಾಂನ ಸೇನಾ ಪ್ರದೇಶಗಳು ಸೇರಿದಂತೆ ಇತರ ಸ್ಥಳಗಳನ್ನು ಗುರಿಯಾಗಿಸಿ ಐಎಸ್ಐ ದಾಳಿ ನಡೆಸಲು ಸಂಚು ರೂಪಿಸಿದೆ ಎಂದು ರಾಜ್ಯ ಪೊಲೀಸರ ವಿಶೇಷ ಶಾಖೆ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.
ಸಾಮೂಹಿಕ ಸಭೆ, ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿ ಐಎಸ್ಐ ಸಂಚು ಯೋಜಿಸುವ ಬಗ್ಗೆ ಜಾಗತಿಕ ಭಯೋತ್ಪಾದಕ ಸಂಘಟನೆಗಳಿಂದ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 23ರಂದು ಅಸ್ಸಾಂನ ಡ್ರಾಂಂಗ್ ಜಿಲ್ಲೆಯಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿದ್ದು, 20 ಜನರು ಗಾಯಗೊಂಡಿದ್ದರು.