Categories: ಅಸ್ಸಾಂ

ಕಾಂಗ್ರೆಸ್‌ ಯುವ ನಾಯಕ ರಾಹುಲ್‌ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವರ ಟಾಂಗ್‌

ಅಸ್ಸಾಂ : ಕಾಂಗ್ರೆಸ್‌ ಯುವ ನಾಯಕ ರಾಹುಲ್‌ ಗಾಂಧಿ ಕೇಂಬ್ರಿಡ್ಜ್‌ ವಿಶ್ವವಿದ್ಯಾನಿಲಯದಲ್ಲಿ ಮಾಡಿದ ಭಾಷಣಕ್ಕೆ ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗುತ್ತಿವೆ. ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್‌, ಕೇಂದ್ರ ಸಚಿವ ಕಿರಣ್‌ ರಿಜುಜು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಹಲವರು ಅವರ ಮಾತುಗಳನ್ನು ಕಟುವಾಗಿ ಟೀಕಿಸಿದ್ದಾರೆ.

ಭಾರತೀಯ ವಿದೇಶಾಂಗ ಸೇವೆಯು ದುರಹಂಕಾರಿಯಾಗಿದೆ ಎಂಬ ರಾಹುಲ್ ಗಾಂಧಿಯವರ ಹೇಳಿಕೆಯ ಕುರಿತಾಗಿ ವಿದೇಶಾಂಗ ಸಚಿವ ಎಸ್.ಜೈಶಂಕರ್‌ “ಅದು ದುರಹಂಕಾರವಲ್ಲ ಬದಲಾಗಿ ಭಾರತವು ಜಗತ್ತಿನ ವೇದಿಕೆಗಳಲ್ಲಿ ಮಾತನಾಡುವ ಆತ್ಮವಿಶ್ವಾಸ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಕೇಂದ್ರ ಸಚಿವ ಕಿರಣ್ ರಿಜಿಜು ಕೂಡ ಪ್ರತಿಕ್ರಿಯಿಸಿದ್ದು “ಕಾಂಗ್ರೆಸ್ ಶೈಲಿಯ ಕಾರ್ಯವೈಖರಿಯಲ್ಲಿ, ರಾಜತಾಂತ್ರಿಕರು ಪಂಡಿತ್ ನೆಹರೂ ಅವರ ಮೊಮ್ಮಕ್ಕಳಿಗೆ ಕಾಲೇಜುಗಳನ್ನು ಸರಿಪಡಿಸುವಲ್ಲಿ ನಿರತರಾಗಿದ್ದರು” ಎಂದು ತಿರುಗೇಟು ನೀಡಿದ್ದಾರೆ. ಅಲ್ಲದೇ “ವಿದೇಶಿ ನೆಲದಲ್ಲಿ ತನ್ನ ದೇಶವನ್ನು ಅವಮಾನಿಸುವ ಮತ್ತು ಆಕ್ರಮಣ ಮಾಡುವ ಮೂಲಕ ಒಬ್ಬ ವ್ಯಕ್ತಿಯು ಯಾವ ರೀತಿಯ ದುಃಖಕರ ಆನಂದವನ್ನು ಪಡೆಯುತ್ತಾನೆ ಎಂದು ನನಗೆ ಅರ್ಥವಾಗುತ್ತಿಲ್ಲ” ಎಂದು ಟ್ವಿಟ್‌ ಮಾಡಿದ್ದಾರೆ.

ಇನ್ನು ಅಸ್ಸಾಂ ಕುರಿತು ಅವರ ಹೇಳಿಕೆಗೆ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ ಅವರು “ನೆಹರುರವರು ಅವರ ಕ್ಯಾಬಿನೆಟ್‌ ಮಿಷನ್‌ ಯೋಜನೆಯಂತೆ ಪಾಕಿಸ್ತಾನದೊಂದಿಗೆ ಇರಲು ನಮ್ಮನ್ನು(ಅಸ್ಸಾಂ) ತೊರೆದಿದ್ದರು. ಗಾಂಧೀಜಿಯವರ ಬೆಂಬಲದೊಂದಿಗೆ, ಗೋಪಿನಾಥ್ ಬೊರ್ಡೊಲೋಯ್ ಅವರು ಅಸ್ಸಾಂ ಅನ್ನು ಭಾರತ ಮಾತೆಯ ಜೊತೆ ಇರಿಸಿಕೊಳ್ಳಲು ಹೆಣಗಾಡಬೇಕಾಯಿತು. ಸತ್ಯವನ್ನು ಸರಿಯಾಗಿ ತಿಳಿದುಕೊಳ್ಳಿ” ಎಂದು ಹೇಳಿದ್ದಲ್ಲದೇ ಇದು ʼನಕಲಿ ಬೌದ್ದಿಕತೆಯ ಎತ್ತರವನ್ನು ಸೂಚಿಸುತ್ತದೆʼ ಎಂದು ಪ್ರತಿಕ್ರಿಯಿಸಿದ್ದಾರೆ.

Sneha Gowda

Recent Posts

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.

18 mins ago

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

34 mins ago

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

44 mins ago

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

58 mins ago

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

1 hour ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

1 hour ago