News Karnataka Kannada
Monday, May 06 2024
ಅಸ್ಸಾಂ

”ದಿ ಕಾಶ್ಮೀರ್ ಫೈಲ್ಸ್” ಸಿನಿಮಾ ನೋಡಲು ಅರ್ಧ ದಿನ ರಜೆ ಘೋಷಣೆ:ಅಸ್ಸಾಂ ಸಿಎಂ

Biswa Sharama
Photo Credit : Twitter

ಡಿಸ್ಪುರ್ : ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಲು ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆಯನ್ನು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಘೋಷಣೆ ಮಾಡಿದ್ದಾರೆ.

ಈ ಘೋಷಣೆಯನ್ನು ಮಾಡಲು ತುಂಬಾ ಸಂತೋಷವಾಗಿದೆ. ಈ ಬಗ್ಗೆ ಅವರು ತಮ್ಮ ಮೇಲಾಧಿಕಾರಿಗಳಿಗೆ ತಿಳಿಸಬೇಕು. ಸಿನಿಮಾಗೆ ಹೋಗಿದ್ದ ಟೀಕೆಟ್‍ಗಳನ್ನು ಮರುದಿನ ಮೇಲಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಶರ್ಮಾ ಅವರು ಸಹ ಸೋಮವಾರ ತಮ್ಮ ಸಂಪುಟದೊಂದಿಗೆ ಗುವಾಹಟಿಯ ಚಿತ್ರಮಂದಿರದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ವೀಕ್ಷಿಸಿದರು.

1990ರ ದಶಕದಲ್ಲಿ ಕಾಶ್ಮೀರಿ ಪಂಡಿತರನ್ನು ಬಲವಂತವಾಗಿ ಹೇಗೆ ಕಾಶ್ಮೀರದಿಂದ ಕಳುಹಿಸಲಾಯಿತು ಎಂಬ ಸತ್ಯವನ್ನು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಲ್ಲಿ ತೋರಿಸಲಾಗಿದೆ.

ಈ ಹಿನ್ನೆಲೆ ಹಿಮಂತ ಬಿಸ್ವಾ ಶರ್ಮಾ ಅವರು, ನಮ್ಮ ಸರ್ಕಾರಿ ನೌಕರರು ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾವನ್ನು ವೀಕ್ಷಿಸಲು ಅರ್ಧ ದಿನದ ವಿಶೇಷ ರಜೆಗೆ ಕೊಡಲಾಗುತ್ತಿದೆ.

ಕಾಶ್ಮೀರಿ ಪಂಡಿತರ ಮೇಲೆ ನಡೆದಿರುವ ದೌರ್ಜನ್ಯವೂ ಮಾನವೀಯತೆಯ ಮೇಲೆ ದೊಡ್ಡ ಕಳಂಕವಾಗಿದೆ ಎಂದು ಹೇಳಿದರು.ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಮತ್ತು ಅವರನ್ನು ಓಡಿಸಿರುವ ರೀತಿ ಮಾನವೀಯತೆಯ ಮೇಲೆ ಕಳಂಕವಾಗಿದೆ. ‘ದಿ ಕಾಶ್ಮೀರ್ ಫೈಲ್ಸ್’ ಜನರ ದುಸ್ಥಿತಿಯನ್ನು ಹೃದಯಕ್ಕೆ ಮುಟ್ಟುವಂತೆ ಚಿತ್ರೀಸಲಾಗಿದೆ. ಇದನ್ನು ನಾನು ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳು ಮತ್ತು @BJP4Assam ಮತ್ತು ಮಿತ್ರಪಕ್ಷಗಳ ಶಾಸಕರೊಂದಿಗೆ ವೀಕ್ಷಿಸಿದ್ದೇನೆ ಎಂದು ಸಿನಿಮಾ ವೀಕ್ಷಿಸಿದ ನಂತರ ಟ್ವೀಟ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು