ಗುವಾಹಟಿ: ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಕೋಪಥರ್ ಪ್ರದೇಶದ ಬಳಿಯ ಬೋರ್ಡಿರಾಕ್ ತಿನಿಯಲಿ ಎಂಬಲ್ಲಿ ಮಂಗಳವಾರ ರಾತ್ರಿ ಅಪಘಾತ ಸಂಭವಿಸಿದೆ. ಡೂಮ್ಡೂಮಾದ ಮಾರುಕಟ್ಟೆಯಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಟ್ರಕ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆಗೆ ಟ್ರಕ್ ಚಾಲಕ ಮದ್ಯ ಸೇವಿಸಿ ವಾಹನ ಚಲಾಯಿಸಿರುವುದೇ ಕಾರಣ ಎನ್ನಲಾಗಿದೆ. ಏಳು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟರೆ. ಹನ್ನೆರಡು ಮಂದಿಗೆ ಗಂಭೀರ ಗಾಯಗಳಾಗಿವೆ.