News Karnataka Kannada
Wednesday, May 08 2024
ಅಸ್ಸಾಂ

ಹಿರಿಯ ನಾಯಕನೊಂದಿಗಿನ ಆತ್ಮೀಯ ದೃಶ್ಯಗಳು ವೈರಲ್‌: ಬಿಜೆಪಿ ನಾಯಕಿ ಆತ್ಮಹತ್ಯೆ

Woman dies after being hit by paint mixer
Photo Credit : News Kannada

ಗುವಾಹಟಿ: ಅಸ್ಸಾಂನ ಬಿಜೆಪಿ ಮಹಿಳಾ ನಾಯಕಿಯೊಬ್ಬರ ನಗ್ನ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್ಯ ಬಿಜೆಪಿಯ ಪ್ರಮುಖ ನಾಯಕಿ ಇಂದ್ರಾಣಿ ತಹಬಿಲ್ದಾರ್ ಹಿರಿಯ ಬಿಜೆಪಿ ಮುಖಂಡರೊಂದಿಗೆ ಆತ್ಮೀಯವಾಗಿರುವ ದೃಶ್ಯಗಳು ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದೇ ಕಾರಣದಿಂದ ಮನನೊಂದು ಗುವಾಹಟಿಯ ಬಾಮುನಿಮೈದಂ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಹಬಿಲ್ದಾರ್ ಚೇಂಬರ್ ಆಫ್ ಕಾಮರ್ಸ್‌ನ ಉಪಾಧ್ಯಕ್ಷರಾಗಿದ್ದರು. ಅಲ್ಲದೆ ಕಿಸಾನ್ ಮೋರ್ಚಾ ಸೆಲ್‌ ನಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದರು.

ಮೂಲಗಳ ಪ್ರಕಾರ, ತಹಬೀಲ್ದಾರ್ ತನ್ನ ಮನೆಯಲ್ಲಿ ಬಾಡಿಗೆದಾರರಾಗಿದ್ದ ಇನ್ನೊಬ್ಬ ಬಿಜೆಪಿ ನಾಯಕನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು. ಇವರ ಚಿತ್ರಗಳು ಇತ್ತೀಚೆಗೆ ಆನ್‌ಲೈನ್‌ನಲ್ಲಿ ಸೋರಿಕೆಯಾಗಿತ್ತು. ಈ ಸಂಬಂಧ ಐಎಎನ್‌ಎಸ್‌ನೊಂದಿಗೆ ಮಾತನಾಡಿದ ಕೇಂದ್ರ ಗುವಾಹಟಿಯ ಡಿಸಿಪಿ ದೀಪಕ್ ಚೌಧರಿ, ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇದನ್ನು ಅಸಹಜ ಸಾವು ಎಂದು ಪರಿಗಣಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ. ಇದುವರೆಗೆ ಚಿತ್ರಗಳು ಸೋರಿಕೆಯಾದ ಬಗ್ಗೆ ದೂರುಗಳು ಬಂದಿಲ್ಲ ಎಂದು ತಿಳಿಸಿದ್ದಾರೆ. ತಹಬಿಲ್ದಾರ್ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು