ಗುವಾಹಟಿ: ಅಸ್ಸಾಂ ಪೊಲೀಸರು 12 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಅಸ್ಸಾಂ-ಮಿಜೋರಾಂ ಗಡಿ ಸಮೀಪದ ಕರೀಂಗಂಜ್ ಜಿಲ್ಲೆಯ ರತಬರಿಯ ಭೆಟರ್ಬಾಂಡ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಡ್ರಗ್ ಪೆಡ್ಲಿಂಗ್ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ಅಬ್ದುಲ್ ಕಲಾಂ ಮತ್ತು ಸಾಜು ಮೊಹಮ್ಮದ್ ಎಂದು ಗುರುತಿಸಲಾಗಿದೆ.
“ಪ್ರಾಥಮಿಕ ತನಿಖೆಯ ಪ್ರಕಾರ, ಐಜ್ವಾಲ್ನಿಂದ ಕರೀಂಗಂಜ್ ಜಿಲ್ಲೆಯ ನಿಲಂಬಜಾರ್ ಪ್ರದೇಶಕ್ಕೆ ಮಾದಕವಸ್ತುಗಳನ್ನು ಮಾರಾಟ ಮಾಡಲಾಗಿದೆ” ಎಂದು ಅಧಿಕಾರಿಗಳು ಹೇಳಿದರು.
ವಶಪಡಿಸಿಕೊಂಡ ಮಾದಕವಸ್ತುಗಳ ಮಾರುಕಟ್ಟೆ ಮೌಲ್ಯ ಸುಮಾರು 12 ಕೋಟಿ ಎಂದು ಪೊಲೀಸರು ತಿಳಿಸಿದ್ದಾರೆ.