ಗುವಾಹಟಿ: ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ (ಎಎಎಸ್ ಯು) ಅಧ್ಯಕ್ಷೆ ದೀಪಂಕಾ ನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಗುವಾಹಟಿ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ವಿದ್ಯಾರ್ಥಿ ಸಂಘಟನೆಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ನಾಥ್ ಅವರು ಅಧ್ಯಕ್ಷ ಸ್ಥಾನಕ್ಕೆ ಮತ್ತು ಸಂಸ್ಥೆಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು.
ಎಎಎಸ್ ಯು ಉಪಾಧ್ಯಕ್ಷ ಉತ್ಪಲ್ ಶರ್ಮಾ ಅವರಿಗೆ ಅಧ್ಯಕ್ಷರ ಜವಾಬ್ದಾರಿಯನ್ನು ಹಸ್ತಾಂತರಿಸಲಾಗಿದೆ.
ತಮ್ಮ ರಾಜೀನಾಮೆಯ ನಂತರ ರಾಜಕೀಯ ಪಕ್ಷವನ್ನು ಸೇರಬಹುದು ಎಂಬ ವದಂತಿಗಳನ್ನು ತಳ್ಳಿಹಾಕಿದ ನಾಥ್, “ನಾನು ಕೇವಲ ವೈಯಕ್ತಿಕ ಕಾರಣಗಳಿಗಾಗಿ ಎಎಎಸ್ ಯುಗೆ ರಾಜೀನಾಮೆ ನೀಡಿದ್ದೇನೆ. ಮುಂದಿನ ಆರು ತಿಂಗಳಲ್ಲಿ ನಾನು ಯಾವುದೇ ರಾಜಕೀಯ ಪಕ್ಷವನ್ನು ಸೇರುವ ಬಗ್ಗೆ ಯೋಚಿಸುವುದಿಲ್ಲ.
ಆದಾಗ್ಯೂ, ಆರು ತಿಂಗಳ ನಂತರ ಮತ್ತು ರಾಜ್ಯದ ರಾಜಕೀಯ ಪರಿಸ್ಥಿತಿಯನ್ನು ಅವಲಂಬಿಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು. ನವೆಂಬರ್ 2020 ರಲ್ಲಿ, ನಾಥ್ ಅವರನ್ನು ಎಎಎಸ್ ಯು ಅಧ್ಯಕ್ಷರಾಗಿ ಪುನರಾಯ್ಕೆ ಮಾಡಲಾಯಿತು.